

ಮೈಸೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ದಟ್ಟಗಳ್ಳಿಯ ಸ್ಟ್ಯಾನ್ಲಿ ಪಾರ್ಕರ್ ಸ್ಕೂಲ್ ಆಫ್ ಮ್ಯೂಸಿಕ್ ಸಂಸ್ಥೆ ವತಿಯಿಂದ ನ.2ರಂದು ಗಾನಾಮೃತ-2 ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಸ್ಟ್ಯಾನ್ಲಿ ಪಾರ್ಕರ್ ತಿಳಿಸಿದರು.
ಅಂದು ಸಂಜೆ 4 ಗಂಟೆಗೆ ನಗರದ ನಾದಬ್ರಹ್ಮ ಸಂಗೀತ ಸಭಾ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಡಾ.ರೇಖಾ ಅನೂಪ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ, ಚರ್ಮರೋಗ ತಜ್ಞ ಡಾ.ಸುರೇಂದ್ರನ್ ಇನ್ನಿತರರು ಪಾಲ್ಗೊಳ್ಳುವರು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಂಸ್ಥೆಯಲ್ಲಿ ಗಾಯನ ಅಭ್ಯಾಸ ಕಲಿತ 30ಕ್ಕೂ ಹೆಚ್ಚು ಗಾಯಕರು ಸುಮಧುರ ಕನ್ನಡ ಹಳೆಯ ಮತ್ತು ಹೊಸ ಚಿತ್ರಗೀತೆಗಳನ್ನು ಹಾಡಿ ರಂಜಿಸಲಿದ್ದಾರೆ. ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಇದು ಸಂಸ್ಥೆಯಿಂದ ನಡೆಯುತ್ತಿರುವ 2ನೇ ಕಾರ್ಯಕ್ರಮ ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಸಿ.ಜಿ.ಮೂರ್ತಿ ಇದ್ದರು.