ಜನರಲ್ ಕೆ.ಎಸ್. ತಿಮ್ಮಯ್ಯ ಪಬ್ಲಿಕ್ ಸ್ಕೂಲ್‌ನಲ್ಲಿ ಜನರಲ್ ತಿಮ್ಮಯ್ಯ ಪುತ್ಥಳಿ

22mdka3 - Copy
Published on

ವಿಜಯವಾಣಿ ಸುದ್ದಿಜಾಲ ಮಡಿಕೇರಿ
ಜನರಲ್ ಕೆ.ಎಸ್. ತಿಮ್ಮಯ್ಯ ಪಬ್ಲಿಕ್ ಸ್ಕೂಲ್‌ನಲ್ಲಿ ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಪುತ್ತಳಿ ಸ್ಥಾಪನೆಗೆ ಶಾಲಾ ಆಡಳಿತ- ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಮಡಿಕೇರಿ ಕೊಡವ ಸಮಾಜ ಅಧ್ಯಕ್ಷ ಮಂಡುವಂಡ ಪಿ. ಮುತ್ತಪ್ಪ ಅಧ್ಯಕ್ಷತೆಯಲ್ಲಿ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸಭೆಯಲ್ಲಿ ಪುತ್ಥಳಿ ಸ್ಥಾಪನೆ ಬಗ್ಗೆ ಚರ್ಚಿಸಲಾಯಿತು. ಮಡಿಕೇರಿ ಕೊಡವ ಸಮಾಜದ ಅಧೀನದಲ್ಲಿ ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಹೆಸರಿನಲ್ಲಿ ಶಾಲೆ ಪ್ರಾರಂಭಿಸಲಾಗಿದೆ. ಮೂರ‌್ನಾಲ್ಕು ತಿಂಗಳಲ್ಲಿ ಜನರಲ್ ತಿಮ್ಮಯ್ಯ ಪುತ್ತಳಿ ಅನಾವರಣಗೊಳ್ಳಲಿದೆ. ಪುತ್ಥಳಿ ನಿರ್ಮಾಣಕ್ಕೆ ಕೊಡವ ಸಮಾಜದ ಕಾರ್ಯದರ್ಶಿ ಕನ್ನಂಡ ಸಂಪತ್ ನೇತೃತ್ವದಲ್ಲಿ ಉಪಸಮಿತಿ ರಚಿಸಲಾಯಿತು.

ಸಭೆಯಲ್ಲಿ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ನಂದಿನೆರವಂಡ ಚೀಯಣ್ಣ, ಸಂಚಾಲಕಿ ಕನ್ನಂಡ ಕವಿತಾ ಬೊಳ್ಳಪ್ಪ, ಮಡಿಕೇರಿ ಕೊಡವ ಸಮಾಜ ಕಾರ್ಯದರ್ಶಿ ಕನ್ನಂಡ ಸಂಪತ್, ನಿರ್ದೇಶಕರಾದ ಕಾಳಚಂಡ ಅಪ್ಪಣ್ಣ, ಚೌರಿರ ಕಾವೇರಿ ಪೂವಯ್ಯ, ಬೊಪ್ಪಂಡ ಸರಳಾ ಕರುಂಬಯ್ಯ, ಮಂಡಿರ ಸದಾ ಮುದ್ದಪ್ಪ, ಮೂವೇರ ಜಯರಾಂ, ನಂದಿನೆರವಂಡ ರವಿ ಬಸಪ್ಪ, ಪುತ್ತರಿರ ಕರುಣ್ ಕಾಳಯ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷೆ ಡಾ.ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ಮುುಖ್ಯೋಪಾಧ್ಯಾಯಿನಿ ಕಲ್ಲುಮಾಡಂಡ ಸರಸ್ವತಿ ಚಂಗಪ್ಪ, ಮೇಲ್ವಿಚಾರಕಿ ಮುಕ್ಕಾಟಿರ ಪೊನ್ನಮ್ಮ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net