

ಕೊಳ್ಳೇಗಾಲ: ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಫಲಿತಾಂಶ ಪ್ರಕಟಗೊಂಡಿದ್ದು, ಪಟ್ಟಣದ ಮುಡಿಗುಂಡ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ 621 ಅಂಕ ಪಡೆದಿದ್ದಾರೆ. ಮುಡಿಗುಂಡದ ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಗಾನವಿ ಆರ್. (617) ಅಂಕ ಪಡೆದು ಕೊಳ್ಳೇಗಾಲ ತಾಲೂಕಿಗೆ ದ್ವಿತೀಯ ಸ್ಥಾನ ಪಡೆದಿದ್ದರು.
ಈ ಫಲಿತಾಂಶ ವಿದ್ಯಾರ್ಥಿನಿಗೆ ತೃಪ್ತಿ ಇರಲಿಲ್ಲ. ಹಾಗಾಗಿ ಎಸ್ಸೆಸ್ಸೆಲ್ಲಿ ಪರೀಕ್ಷೆ-2 ತೆಗೆದುಕೊಂಡು ಇಂಗ್ಲಿಷ್, ಕನ್ನಡ, ವಿಜ್ಞಾನ ಈ ಮೂರು ವಿಷಯಕ್ಕೆ ಮರು ಪರೀಕ್ಷೆ ಬರೆದಿದ್ದರು. ಇದೀಗ ಫಲಿತಾಂಶ ಹೊರಬಿದ್ದಿದ್ದು ಕನ್ನಡದಲ್ಲಿ 1, ವಿಜ್ಞಾನದಲ್ಲಿ 4 ಅಂಕ ಹೆಚ್ಚಾಗಿದೆ. 621 ಅಂಕಗಳನ್ನು ಪಡೆದಿದ್ದಾರೆ. ವಿದ್ಯಾರ್ಥಿನಿಯ ಸಾಧನೆಗೆ ಎಸ್‌ಡಿಎಂಸಿ ಅಧ್ಯಕ್ಷ ಪ್ರಕಾಶ್, ಆದರ್ಶ ವಿದ್ಯಾಲಯ ಮುಖ್ಯಶಿಕ್ಷಕಿ ಆರ್.ಪ್ರಿಯದರ್ಶಿನಿ ಹರ್ಷ ವ್ಯಕ್ತಪಡಿಸಿದ್ದಾರೆ.