

ಧಾರವಾಡ: ಸಂಗೀತಗಾರರು ಧಾರವಾಡದ ಕಲೆ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯನ್ನು ರಾಷ್ಟç ಮಟ್ಟದಲ್ಲಿ ವಿಸ್ತರಿಸಿದ್ದಾರೆ ಎಂದು ಗದಗ ವೀರೇಶ್ವರ ಪುಣ್ಯಾಶ್ರಮದ ಪೀಠಾಽಪತಿ ಕಲ್ಲಯ್ಯ ಅಜ್ಜ ಹೇಳಿದರು.
ನಗರದ ಡಾ. ಪುಟ್ಟರಾಜ ಗವಾಯಿ ಪ್ರತಿಷ್ಠಾನದಿಂದ ಇಲ್ಲಿನ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಗಾನಯೋಗಿ ಪಂ. ಪಂಚಾಕ್ಷರಿ ಗವಾಯಿಗಳ 133ನೇ ಜಯಂತ್ಯುತ್ಸವ ಹಾಗೂ ಸಂಗೀತ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಪಂ. ಪುಟ್ಟರಾಜರು ಅಂಧ, ಅನಾಥರಿಗೆ ಅನ್ನ, ಆಶ್ರಯ ಮತ್ತು ಸಂಗೀತ ಶಿಕ್ಷಣ ನೀಡಿ ಸಂಗೀತ ದಿಗ್ಗಜರಾಗಿ ಬೆಳೆಯಲು ಕಾರಣರಾದರು ಎಂದು ಸ್ಮರಿಸಿದರು.
ಅಧ್ಯಕ್ಷತೆ ವಹಿಸಿದ್ದ ಮನೋರೋಗ ತಜ್ಞ ಡಾ. ಆನಂದ ಪಾಂಡುರAಗಿ ಮಾತನಾಡಿ, ವೈಜ್ಞಾನಿಕ ಯುಗದಲ್ಲಿ ಸಂಗೀತಕ್ಕೆ ಮನಸ್ಸನ್ನು ಆಹ್ಲಾದಿಸುವ ಶಕ್ತಿ ಇದೆ. ಪ್ರಸ್ತುತ ಮನೋವೈದ್ಯಕೀಯ ಕ್ಷೇತ್ರದಲ್ಲಿ ಸಂಗೀತದ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಸಂಗೀತ ಕಾರ್ಯಕ್ರಮಗಳು ಸಾತ್ವಿಕ ಮತ್ತು ಭಾವನಾತ್ಮಕ ಬಾಂಧವ್ಯ ಬೆಸೆಯುತ್ತವೆ ಎಂದರು.
ಗಾನಯೋಗಿ ಪಂಚಾಕ್ಷರಿ ಗವಾಯಿ ಪ್ರಶಸ್ತಿ ಪುರಸ್ಕೃತ ಪಂ. ಸೋಮನಾಥ ಮರಡೂರ, ನಿಜಗುಣ ಪುರಂದರ ಪ್ರಶಸ್ತಿ ಪುರಸ್ಕೃತ ಪಂ. ಎಂ. ವೆಂಕಟೇಶಕುಮಾರ, ಅಕ್ಕಮಹಾದೇವಿ ಮಠ, ಬಸವ ರಾಷ್ಟಿçÃಯ ಪುರಸ್ಕಾರಕ್ಕೆ ಭಾಜನರಾದ ಡಾ. ವೀರಣ್ಣ ರಾಜೂರ, ಡಾ. ಎನ್.ಜಿ. ಮಹದೇವಪ್ಪ, ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಪುರಸ್ಕೃತ ಮಾಲತಿ ಪಟ್ಟಣಶೆಟ್ಟಿ ಮತ್ತು ಅಕ್ಕಮಹಾದೇವಿ ಪ್ರಶಸ್ತಿಗೆ ಭಾಜನರಾದ ಜಗನ್ಮಾತೆ ಅಕ್ಕಮಹಾದೇವಿ ಮತ್ತು ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ ಪುರಸ್ಕೃತ ಗಾಯತ್ರಿ ದೇಸಾಯಿ ಅವರನ್ನು ಸನ್ಮಾನಿಸಲಾಯಿತು.
ಶಂಕರ ಕುಂಬಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಉದಯಕುಮಾರ ದೇಸಾಯಿ, ಉಸ್ತಾದ್ ಶಫೀಕಖಾನ್, ಪಿ.ಸಿ. ಹಿರೇಮಠ, ಇತರರಿದ್ದರು. ಮೇಘಾ ಪಾಟೀಲ ನಿರೂಪಿಸಿದರು. ಡಾ. ಅರ್ಜುನ ವಠಾರ ವಂದಿಸಿದರು.