ಗಂಡಾನೆ ಕಳೇಬರ ಪತ್ತೆ

3-GPT-3
ಗುಂಡ್ಲುಪೇಟೆ ತಾಲೂಕಿನ ಓಂಕಾರ್ ವಲಯದ ಅರಣ್ಯದಲ್ಲಿ ಪತ್ತೆಯಾದ ಆನೆಯ ಕಳೇಬರವನ್ನು ಅರಣ್ಯಾಧಿಕಾರಿಗಳು ಪರಿಶೀಲಿಸಿದರು.
Published on

ಗುಂಡ್ಲುಪೇಟೆ: ಬಂಡೀಪುರ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಆನೆಯ ಕಳೇಬರ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ.

ಹುಲಿ ಯೋಜನೆಯ ಓಂಕಾರ್ ವಲಯದ ಕುರುಬರಹುಂಡಿ ಸೆಕ್ಷನ್‌ನ ನಾಗಣಪುರ ಬ್ಲಾಕ್‌ನಲ್ಲಿ ಅರಣ್ಯ ಸಿಬ್ಬಂದಿ ಗಸ್ತು ತಿರುಗುವಾಗ ಸುಮಾರು 20 ವರ್ಷ ವಯಸ್ಸಿನ ಗಂಡಾನೆ ಕಳೇಬರ ಪತ್ತೆಯಾಗಿದೆ.

ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆನೆ ಕೆಲವು ದಿನಗಳ ಹಿಂದೆ ಸಾವಿಗೀಡಾಗಿದೆ. ವೈದ್ಯರು ಸ್ಥಳಕ್ಕೆ ಬಂದು ಮರಣೋತ್ತರ ಪರೀಕ್ಷೆ ಮಾಡಿ ವರದಿ ನೀಡಿದ ನಂತರ ಸಾವಿಗೆ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net