ಶಾಲಾ ಮಕ್ಕಳಿಗೆ ಲೇಖನ ಸಾಮಗ್ರಿ ವಿತರಣೆ

22 Gandasi 1
Published on

 ಗಂಡಸಿ ಗ್ರಾಪಂ ಸೇವಾಕಾರ್ಯ

ಗಂಡಸಿ : ಅರಸೀಕೆರೆ ತಾಲೂಕಿನ ಗಂಡಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹಳ್ಳಿಗಳಲ್ಲಿ 1ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಅಂಗವಿಕಲ ವಿದ್ಯಾರ್ಥಿಗಳಿಗೆ ಗಂಡಸಿ ಗ್ರಾಮ ಪಂಚಾಯಿತಿ ವತಿಯಿಂದ ಮಂಗಳವಾರ ಉಚಿತವಾಗಿ ಲೇಖನ ಸಾಮಗ್ರಿ ವಿತರಣೆ ಮಾಡಲಾಯಿತು. ಗ್ರಾಪಂ ಅಧ್ಯಕ್ಷ ಜಿ.ಎಸ್. ಚಂದ್ರಶೇಖರ ಅವರು 25 ಮಕ್ಕಳಿಗೆ ಶಾಲಾ ಬ್ಯಾಗ್, ನೋಟ್ ಪುಸ್ತಕ, ವಾಟರ್ ಕ್ಯಾನ್, ಜಾಮಿಟ್ರಿ ಬಾಕ್ಸ್ ಸೇರಿದಂತೆ ಹಲವು ಲೇಖನ ಸಾಮಗ್ರಿಗಳನ್ನು ನೀಡಿದರು. ಅಂಗವಿಕಲ ಮಕ್ಕಳೂ ಶಿಕ್ಷಣ ರಂಗದಲ್ಲಿ ಸಾಧನೆ ಮಾಡಬೇಕು ಎಂಬ ಉದ್ದೇಶದಿಂದ ಗ್ರಾಪಂ ಈ ಸೇವಾ ಚಟುವಟಿಕೆ ಮಾಡುತ್ತಿದೆ ಎಂದು ಅವರು ತಿಳಿಸಿದರು.

ವಿತರಣಾ ಕಾರ್ಯಕ್ರಮದಲ್ಲಿ ಗ್ರಾಪಂ ಉಪಾಧ್ಯಕ್ಷೆ ಅನುಸೂಯಮ್ಮ, ಗ್ರಾಪಂ ಮಾಜಿ ಅಧ್ಯಕ್ಷರಾದ ದಿನೇಶ, ಸೀಮಾ ಸುಲ್ತಾನ,

ಜಯಲಕ್ಷ್ಮಮ್ಮ, ಮಾಜಿ ಉಪಾಧ್ಯಕ್ಷರಾದ ಕುಮಾರ, ಪ್ರದೀಪ್, ನಾಗರಾಜ್ ಮತ್ತು ಗ್ರಾಮ ಪಂಚಾಯತಿ ಸದಸ್ಯರು,

ಸಿಬ್ಬಂದಿ ಸೇರಿದಂತೆ ಪಾಲಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net