

ಮಡಿಕೇರಿ:
ಜಿಲ್ಲಾಡಳಿತ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸರ್ವೋದಯ ಸಮಿತಿ ವತಿಯಿಂದ ‘ಹುತಾತ್ಮರ ದಿನಾಚರಣೆ’ ನಗರದಲ್ಲಿ ಗುರುವಾರ ಶ್ರದ್ಧಾಭಕ್ತಿಯಿಂದ ನಡೆಯಿತು. ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆಯಲ್ಲಿರಿಸಲಾಗಿದ್ದ ಮಹಾತ್ಮ ಗಾಂಧೀಜಿ ‘ಚಿತಾಭಸ್ಮ’ವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವ ಸಮರ್ಪಿಸಲಾಯಿತು.
ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ವಾದ್ಯದೊಂದಿಗೆ ನಗರದ ಮಂಗೇರಿರ ಮುತ್ತಣ್ಣ ಹಾಗೂ ಜನರಲ್ ಕೆ.ಎಸ್. ತಿಮ್ಮಯ್ಯ ವೃತ್ತದ ಮುಖ್ಯ ರಸ್ತೆ ಮೂಲಕ ಗಾಂಧೀಜಿಯವರ ಚಿತಾಭಸ್ಮವನ್ನು ಕೊಂಡೊಯ್ದು ಗಾಂಧಿ ಮಂಟಪ ಬಳಿ ಇರಿಸಿ ಪೊಲೀಸ್ ಗೌರವದೊಂದಿಗೆ ಗೌರವ ಸಲ್ಲಿಸಲಾಯಿತು. ಬಳಿಕ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಾಯಿತು.
ಇದೇ ವೇಳೆ ಪೊಲೀಸ್ ಮೀಸಲು ಪಡೆಯ ಸಬ್ ಇನ್ಸ್ಪೆಕ್ಟರ್ ಹನುಮಂತ ಕೌಜಲಗಿ ಮತ್ತು ತಂಡದವರು ಮೂರು ಸುತ್ತುಗಳ ಕುಶಾಲತೋಪು ಹಾರಿಸುವ ಮೂಲಕ ರಾಷ್ಟçಪಿತರಿಗೆ ಪೊಲೀಸ್ ಗೌರವಾರ್ಪಣೆ ಸಲ್ಲಿಸಲಾಯಿತು. ನಂತರ ಮೌನಾಚರಣೆ ನಡೆಯಿತು. ವೆಂಕಟೇಶ್ ಅವರ ನೇತೃತ್ವದಲ್ಲಿ ಪೊಲೀಸ್ ತಂಡದವರು ರಾಷ್ಟçಗೀತೆ ಹಾಡಿ ಗಮನ ಸೆಳೆದರು.
ಬಳಿಕ ಸರ್ವಧರ್ಮ ಪ್ರಾರ್ಥನೆ ನಡೆಯಿತು, ಗಾಂಧೀಜಿಯವರ ಮೆಚ್ಚಿನ ಭಜನಾ ಗಾಯನವನ್ನು ಸಂತ ಮೈಕಲರ ಶಾಲೆ, ಭಾರತ್ ಸೇವಾ ದಳ ಹಾಗೂ ಕ್ರೆಸೆಂಟ್ ಶಾಲೆಯ ಗೈಡ್ಸ್ ವಿದ್ಯಾರ್ಥಿಗಳು ನಡೆಸಿಕೊಟ್ಟರು. ಸರ್ವಧರ್ಮ ಗುರುಗಳಿಂದ ಭಗವದ್ಗೀತೆ(ಸಂತೋಷ್ ಭಟ್), ಬೈಬಲ್(ರೆವೆರಂಡ್ ಫಾದರ್ ದೀಪಕ್), ಕುರಾನ್(ಇಸಾಕ್ ಅಹ್ಮದ್) ಸಂದೇಶಗಳನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಮಹಾತ್ಮ ಗಾಂಧೀಜಿ ಅವರು ‘ನನ್ನ ಜೀವನವೇ ನನ್ನ ಸಂದೇಶ’ವೆAದು ಹೇಳಿದ್ದಾರೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರ ಜೀವನವು ಗಾಂಧೀಜಿಯವರAತೆ ಸಂದೇಶವಾಗಬೇಕು. ಶಾಂತಿ, ಏಕತೆ, ಭ್ರಾತೃತ್ವ, ಸಮಾನತೆ, ಇವುಗಳು ಗಾಂಧೀಜಿಯವರ ತತ್ವ ಸಂದೇಶಗಳಾಗಿದ್ದು, ಮಹಾತ್ಮ ಗಾಂಧೀಜಿ ಅವರ ಆದರ್ಶಗಳನ್ನು ಜೀವನದಲ್ಲಿ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು. ಮಡಿಕೇರಿಯಲ್ಲಿ ಗಾಂಧಿ ಭವನ ನಿರ್ಮಾಣವಾಗಿದ್ದು, ವಿವಿಧ ಚಟುವಟಿಕೆಗಳು ನಡೆಯುತ್ತಿವೆ. ಹಾಗೆಯೇ ಗಾಂಧಿ ಸ್ಮಾರಕ ಉದ್ಯಾನದ ಮುಂದುವರಿದ ಕಾಮಗಾರಿ ಶೀಘ್ರ ಆರಂಭವಾಗಲಿದೆ. ಆ ನಿಟ್ಟಿನಲ್ಲಿ ಮಡಿಕೇರಿಯಲ್ಲಿ ಗಾಂಧೀಜಿಯವರ ಸಂದೇಶಗಳು ಎಲ್ಲೆಡೆ ಫಸರಿಸಲಿವೆ. ಕೊಡಗು ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಹುತಾತ್ಮರ ದಿನಾಚರಣೆ ಪ್ರಯುಕ್ತ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವನ್ನು ಮೆರವಣಿಗೆ ಮೂಲಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಗಾಂಧೀ ಸ್ಮಾರಕ ಉದ್ಯಾನವನ ಕಾಮಗಾರಿ ಪೂರ್ಣಗೊಂಡ ನಂತರ ಚಿತಾಭಸ್ಮವನ್ನು ಇಡಲಾಗುತ್ತದೆ. ಗಾಂಧೀಜಿಯವರ ಪ್ರಿಯವಾದ ಭಜನಾ ಹಾಡುಗಳನ್ನು ವಿವಿಧ ಸಭಾ ಕಾರ್ಯಕ್ರಮಗಳಲ್ಲಿ ಹಾಡುವಂತಾಗಬೇಕು. ಇದರಿಂದ ಗಾಂಧೀಜಿ, ತತ್ವಗಳು, ಆದರ್ಶಗಳನ್ನು ಪ್ರತಿಯೊಬ್ಬರಿಗೂ ತಿಳಿಸಿದಂತಾಗುತ್ತದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ ಮಹಾತ್ಮ ಗಾಂಧೀಜಿಯವರ ಶಾಂತಿ ಸಂದೇಶವು ಸಾರ್ವಕಾಲೀಕವಾಗಿವೆ. ಆ ನಿಟ್ಟಿನಲ್ಲಿ ಗಾಂಧೀಜಿಯವರ ಸಂದೇಶಗಳು ಪ್ರತಿಯೊಬ್ಬರಿಗೂ ತಲುಪಬೇಕು. ಪ್ರತಿಯೊಬ್ಬರೂ ಮತ್ತೊಬ್ಬರನ್ನು ಗೌರವಿಸಬೇಕು. ಯಾರೂ ಸಹ ಅಶಾಂತಿ ಉಂಟು ಮಾಡಬಾರದು. ಶಾಂತಿ, ಸೌರ್ಹಾಧತೆ ಕಾಪಾಡಿದಲ್ಲಿ ಗಾಂಧೀಜಿಯವರನ್ನು ಗೌರವಿಸಿದಂತೆ ಎಂದು ಅಭಿಪ್ರಾಯಪಟ್ಟರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ ಮಹಾತ್ಮ ಗಾಂಧೀಜಿಯವರು ಶತಮಾನದ ಮಹಾನ್ ವ್ಯಕ್ತಿ ಎಂದರೆ ತಪ್ಪಾಗಲಾರದು.
ಗಾಂಧೀಜಿಯವರು ಸಮಾನತೆ, ಸ್ವಾತಂತ್ರö್ಯಕ್ಕಾಗಿ ಹೋರಾಟ ಮಾಡಿದ್ದಾರೆ. ಹಾಗೆಯೇ ಪರಿಸರ ಶುಚಿತ್ವಕ್ಕೆ ಒತ್ತು ನೀಡಿದ್ದರು. ಇವರು ವಿಶಾಲ ಮನೋಭಾವ ಹೊಂದಿ ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಸರ್ವೋದಯ ಸಮಿತಿಯ ನಿಕಟ ಪೂರ್ವ ಅಧ್ಯಕ್ಷರಾದ ಟಿ.ಪಿ.ರಮೇಶ್ ಮಾತನಾಡಿ ಗಾಂಧಿ ಸ್ಮಾರಕ ಉದ್ಯಾನವನ ನಿರ್ಮಾಣವಾದ ನಂತರ ಚಿತಾಭಸ್ಮವನ್ನು ಇಟ್ಟು ಗೌರವಿಸಲಾಗುತ್ತದೆ ಎಂದು ಹೇಳಿದರು.
ಸರ್ವೋದಯ ಸಮಿತಿ ಪ್ರಧಾನ ಕಾರ್ಯದರ್ಶಿ ಮುನಿರ್ ಅಹ್ಮದ್ ಮಾತನಾಡಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ಸರ್ವೋದಯ ಸಮಿತಿ ಸದಸ್ಯರಾದ ತೆನ್ನಿರಾ ಮೈನಾ, ಚಂದ್ರಶೇಖರ್, ಪ್ರಕಾಶ್ ಆಚಾರ್ಯ, ಕಾನಹಿತ್ಲು ಮೊಣ್ಣಪ್ಪ, ತೋರೇರ ಮುದ್ದಯ್ಯ, ರೇವತಿ ರಮೇಶ್, ಪ್ರಭು ರೈ, ಕೆ.ಎಂ.ವೆAಕಟೇಶ್, ಭಾರತ್ ಸೇವಾದಳದ ಕಾರ್ಯದರ್ಶಿ ಮೋಂತಿ ಗಣೇಶ್, ಅಂಬೆಕಲ್ಲು ನವೀನ್ ಮತ್ತಿತರರು ಇದ್ದರು.