ಬಿ.ಜಿ.ಪುರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

6mlk1
Published on


ಮಂಡ್ಯ : ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದ್ದ ಮಳವಳ್ಳಿ ತಾಲೂಕಿನ ಬಿ.ಜಿ.ಪುರ ಗ್ರಾಮ ಪಂಚಾಯಿತಿಗೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕೆಟ್ ಹಾಲ್‌ನಲ್ಲಿ ಇತ್ತೀಚೆಗೆ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರಶಸ್ತಿ ನೀಡಿದರು.


ಪಂಚಾಯತ್ ರಾಜ್ ಇಲಾಖೆ ಜಾರಿಗೆ ತರುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಗಣನೀಯ ಸಾಧನೆ ಮಾಡಿರುವ ಗ್ರಾಪಂಗಳಿಗೆ ಗಾಂಧಿಗ್ರಾಮ ಪುರಸ್ಕಾರ ಪ್ರಶಸ್ತಿಯ ಜತೆಗೆ 5 ಲಕ್ಷ ರೂ. ಬಹುಮಾನವನ್ನು ಪ್ರತಿವರ್ಷ ಸರ್ಕಾರ ನೀಡುತ್ತಿದೆ.

ಈ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಬಿ.ಜಿ.ಪುರ ಗ್ರಾಮ ಪಂಚಾಯಿತಿ 2021-22ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪಡೆದುಕೊಂಡಿದೆ. ಗ್ರಾಪಂ ಅಧ್ಯಕ್ಷ ಸಿದ್ದರಾಜು ಹಾಗೂ ಪಿಡಿಒ ಜಯಸ್ವಾಮಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಪ್ರಶಸ್ತಿ ಸ್ವೀಕರಿಸಿದ್ದಾರೆ. ಇದೇ ಸಂದರ್ಭದಲ್ಲಿ ಉಪಾಧ್ಯಕ್ಷೆ ಪರಿಮಳಾ, ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net