ಗಾಂಧಿ ಬದುಕು ಸದಾ ಸ್ಮರಣೀಯ

gandhi jayanthi koppal dc office dc naleen athul
Published on

ಕೊಪ್ಪಳ; ಅಹಿಂಸೆ, ಸತ್ಯ, ಶಾಂತಿ ತತ್ವಗಳಿಂದ ಬ್ರಿಟಿಷರ ವಿರುದ್ಧ ಹೋರಾಡಿದ ಮಹಾತ್ಮ ಗಾಂಧೀಜಿ ಹೋರಾಟ ಸದಾ ಸ್ಮರಣೀಯ ಎಂದು ನಗರಸಭೆ ಅಧ್ಯಕ್ಷ ಅಮ್ಜದ್​ ಪಟೇಲ್​ ಹೇಳಿದರು.

ಜಿಲ್ಲಾಡಳಿತ, ವಾರ್ತಾ ಇಲಾಖೆಯಿಂದ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್​ನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಹಾಗೂ ಲಾಲ್​ ಬಹಾದೂರ್​ ಶಾಸ್ತ್ರಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಎಲ್ಲ ಧರ್ಮಿಯರನ್ನು ಒಗ್ಗೂಡಿಸಿ ಸ್ವಾತಂತ್ರ$್ಯಕ್ಕಾಗಿ ಹೋರಾಡಿದರು. ಭಾರತೀಯರಾದ ನಾವೆಲ್ಲ ಒಂದೇ ಎಂದರು. ಅವರ ಜಯಂತಿ ರಾಷ್ಟ್ರಾದ್ಯಂತ ಹಬ್ಬವಾಗಿ ಆಚರಿಸುತ್ತಿರುವುದು ಅವರ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿ. ಅದರಂತೆ ಲಾಲ್​ ಬಹಾದೂರ್​ ಶಾಸ್ತ್ರಿ ದೇಶ ಕಂಡ ಅಪರೂಪದ ಪ್ರಧಾನಿ. ಉತ್ತಮ ಆಡಳಿತಗಾರ. ಅತ್ಯುನ್ನತ ಹುದ್ದೆಯಲ್ಲಿದ್ದರೂ ಸರಳವಾಗಿ ಬದುಕಿದರು ಎಂದರು.

ಡಿಸಿ ನಲಿನ್​ ಅತುಲ್​ ಮಾತನಾಡಿ, ಗಾಂಧೀಜಿ ಉತ್ತಮ ಓದುಗ. ಬರಹಗಾರ. ಪತ್ರಕರ್ತ. ನಿತ್ಯ ಶ್ರಮದಾನ ಮಾಡುತ್ತಿದ್ದರು. ಸತ್ಯ, ಅಹಿಂಸಾ ತತ್ವ ಪಾಲಿಸಿದರು. ಸರಳತೆ ರೂಢಿಸಿಕೊಂಡಿದ್ದರು. ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದರು. ಮಹಾತ್ಮ ಗಾಂಧೀಜಿಯವರ ಜೀವನ ಮೌಲ್ಯಗಳು ವಿದ್ಯಾರ್ಥಿ, ಯುವಜನರಿಗೆ ಮಾದರಿ ಎಂದು ಅಭಿಪ್ರಾಯಪಟ್ಟರು.

ಲೇಖಕಿ ಸಾವಿತ್ರಿ ಮುಜುಮದಾರ ವಿಶೇಷ ಉಪನ್ಯಾಸ ನೀಡಿದರು. ಎಡಿಸಿ ಸಿದ್ರಾಮೇಶ್ವರ ಪ್ರತಿಜ್ಞಾ ವಿಧಿ ಬೋಧಿಸಿದರು. ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಗಾಂಧಿ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳ ನೃತ್ಯ ಗಮನ ಸೆಳೆದವು. ಗಾಂಧೀಜಿ ಅವರಿಗೆ ಪ್ರಯವಾಗ ಭಜನಾ ಹಾಡುಗಳನ್ನು ಕಲಾವಿದರು ಪ್ರಸ್ತುತಪಡಿಸಿದರು.

ನಗರಸಭೆ ಉಪಾಧ್ಯೆ ಅಶ್ವಿನಿ ಗದುಗಿನಮಠ, ಡಿಯುಡಿಸಿ ಪಿಡಿ ರೇಷ್ಮಾ ಹಾನಗಲ್​, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್​., ಡಿಡಿಪಿಯು ಜಗದೀಶ, ಡಿಡಿಪಿಐ ಶ್ರೀಶೈಲ ಬಿರಾದಾರ, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿದೇಶಕ ಕೊಟ್ರೇಶ ಮರಬನಳ್ಳಿ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಸುರೇಶ ಕೊಕರೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net