ಎಸ್‌ಡಿಎಂ ಶಾಲೆಯಲ್ಲಿ ಸರ್ವಧರ್ಮ ಪ್ರಾರ್ಥನೆ

sdm
Published on

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಗಾಂಧಿ ಜಯಂತಿ ಹಾಗೂ ಶಾಸ್ತ್ರಿಜಿ ಜಯಂತಿ ಆಚರಿಸಲಾಯಿತು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ ಬುಲ್ ಬುಲ್ ಸ್ಕೌಟ್ಸ್ ಗೈಡ್ಸ್ ಸರ್ವಧರ್ಮ ಪ್ರಾರ್ಥನೆಯನ್ನು ಆಯೋಜಿಸಿದರು. ಹಿಂದು, ಕ್ರಿಶ್ಚಿಯನ್, ಮುಸ್ಲಿಂ, ಜೈನ ಧರ್ಮಗಳಿಂದ ಧರ್ಮ ಗ್ರಂಥಗಳನ್ನು ಪಠಿಸಲಾಯಿತು ಹಾಗೂ ಶಾಲಾ ಪರಿಸರವನ್ನು ಸ್ವಚ್ಛಗೊಳಿಸಲಾಯಿತು.

ಶಾಲಾ ಅಧ್ಯಾಪಕ ವೃಂದದವರು ಹಾಗೂ ಕಬ್ಸ್, ಬುಲ್ ಬುಲ್, ಸ್ಕೌಟ್, ಗೈಡ್ ಹಾಗೂ ಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net