ನೖಋತ್ಯ ರೈಲ್ವೆಯಿಂದ ಗಾಂಧಿ ಜಯಂತಿ

New SWR New
Published on

ಹುಬ್ಬಳ್ಳಿ : ನೈಋತ್ಯ ರೈಲ್ವೆ ವಲಯ ಮತ್ತು ಹುಬ್ಬಳ್ಳಿ ವಿಭಾಗದ ವತಿಯಿಂದ ಇಲ್ಲಿನ ಎಸ್.ಎಸ್.ಎಸ್. ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಮಹಾತ್ಮ ಗಾಂಧಿ ಜಯಂತಿಯನ್ನು ಬುಧವಾರ ಆಚರಿಸಲಾಯಿತು.

ನೈಋತ್ಯ ರೈಲ್ವೆ ವಲಯದಾದ್ಯಂತ ಸೆ. 17 ರಿಂದ ಆರಂಭಿಸಲಾಗಿದ್ದ ಸ್ವಚ್ಛತಾ ಪಾಕ್ಷಿಕ ಅಭಿಯಾನದ ಕೊನೆಯ ದಿನವಾದ ಬುಧವಾರದಂದು ಸ್ವಚ್ಛತಾ ಹಿ ಸೇವಾ ದಿನವಾಗಿಯೂ ಆಚರಿಸಲಾಯಿತು.

ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಅರವಿಂದ ಶ್ರೀವಾಸ್ತವ, ಅಪರ ಪ್ರಧಾನ ವ್ಯವಸ್ಥಾಪಕ ಕೆ.ಎಸ್. ಜೈನ್, ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಹರ್ಷ ಖರೆ ಹಾಗೂ ವಿಭಾಗದ ಪ್ರಧಾನ ಮುಖ್ಯಸ್ಥರು ರೈಲು ನಿಲ್ದಾಣದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅರವಿಂದ ಶ್ರೀವಾಸ್ತವ, ಸೆ. 7 ರಿಂದ ಅ. 2 ರವರೆಗೆ ನಡೆಸಲಾದ ಸ್ವಚ್ಛತಾ ಹಿ ಸೇವಾ ಅಭಿಯಾನವು ದೇಶಾದ್ಯಂತ ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಉತ್ತೇಜಿಸುತ್ತದೆ ಎಂದು ತಿಳಿಸಿದರು.

ಅರವಿಂದ ಶ್ರೀವಾಸ್ತವ ಮತ್ತು ಕೆ.ಎಸ್. ಜೈನ್ ಅವರು ಎಸ್.ಎಸ್.ಎಸ್ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸ್ವಚ್ಛತೆ ಮತ್ತು ಏಕಬಳಕೆಯ ಪ್ಲಾಸ್ಟಿಕ್ ನಿಮೂರ್ಲನೆ ಬಗ್ಗೆ ಜಾಗೃತಿ ಮೂಡಿಸಲು ಪ್ರಯಾಣಿಕರಿಗೆ ಸೆಣಬಿನ ಚೀಲಗಳನ್ನು ವಿತರಿಸಿದರು. ನಂತರ ನಿಲ್ದಾಣದ ಆವರಣದಲ್ಲಿ ಹಿರಿಯ ಅಧಿಕಾರಿಗಳ ಜತೆ ಶ್ರಮದಾನದಲ್ಲಿ ಪಾಲ್ಗೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net