ಜಿಪಂ ಕಚೇರಿಯಲ್ಲಿ ಬಾಪೂಜಿಗೆ ನಮನ

IMG-20241002-WA0035
Published on

ಕಲಬುರಗಿ : ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ಬಾಪುವಿನ ಬಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.

ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ಅವರು ಗಾಂಧೀಜಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪ್ರತಿಯೊಬ್ಬರು ಗಾಂಧೀಜಿಯ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಸಿಬ್ಬಂದಿಗಳಿಗೆ
ಕರೆ‌‌ ನೀಡಿದರು.

ಈ ಸಂದರ್ಭದಲ್ಲಿ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಯೋಜನಾ ನಿರ್ದೇಶಕ ಜಗದೇವಪ್ಪ, ಸಿ.ಪಿ.ಓ ಶರಣಯ್ಯ ಎಸ್. ಮಠಪತಿ ಸೇರಿದಂತೆ ಇತರೆ ಅಧಿಕಾರಿ ಸಿಬ್ಬಂದಿ ವರ್ಗದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net