

ಕುಂಬಳೆ: ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು.
ಶಾಲಾ ಮುಖ್ಯಶಿಕ್ಷಕ ಗೋವಿಂದ ಭಟ್ ಪುಷ್ಪಾರ್ಚನೆಗೈದು ಮಾತನಾಡಿದರು. ವಿದ್ಯಾರ್ಥಿಗಳು, ಉಜ್ವಲ ಭವಿಷ್ಯಕ್ಕಾಗಿ ಸದ್ಗುಣಗಳನ್ನು ಬೆಳೆಸುವ ಗುರಿಯನ್ನು ಹೊಂದಬೇಕು. ಇದಕ್ಕೆ ಗಾಂಧಿಯವರ ಜೀವನಾದರ್ಶ ಪ್ರೇರಣೆಯಾಗಬೇಕು ಎಂದರು.
ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನೂ ಆಚರಿಸಲಾಯಿತು. ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.