ಮೈಸೂರು ಜಿಲ್ಲಾಡಳಿತದಿಂದ ಗಾಂಧಿ ಜಯಂತಿ

Gandhi Jayanti was celebrated by Mysore district administration
Published on

ಮೈಸೂರು: ಜಿಲ್ಲಾಡಳಿತ, ನಗರಪಾಲಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಬುಧವಾರ ನಗರದ ಪುರಭವನದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸರ್ವಧರ್ಮ ಪ್ರಾರ್ಥನಾ ಸಭೆ ನಡೆಯಿತು.

ಇದಕ್ಕೂ ಮುನ್ನ ಗಾಂಧಿವೃತ್ತದಲ್ಲಿರುವ ಗಾಂಧಿ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹಾಗೂ ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು. ಬಳಿಕ ಪುರಭವನದಲ್ಲಿ ಹಮ್ಮಿಕೊಂಡಿದ್ದ ಸರ್ವಧರ್ಮ ಪ್ರರ್ಥನಾ ಸಭೆಯಲ್ಲಿ ಹಿಂದು, ಇಸ್ಲಾಂ, ಬೌದ್ಧ ಸಿಖ ಹಾಗೂ ಜೈನ ಧರ್ಮದ ಗುರುಗಳು ಪ್ರಾರ್ಥನೆ ನೆರವೇರಿಸಿದರು.

ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಶಾಸಕ ತನ್ವೀರ್ ಸೇಠ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ನಗರಪಾಲಿಕೆ ಆಯುಕ್ತ ಆಸಾದ್ ಉರ್ ರೆಹಮಾನ್ ಷರೀಫ್, ಡಿಸಿಪಿ ಎಸ್. ಜಾಹ್ನವಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಹಬೀಬ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಕೆ.ಬಿ.ಪ್ರಭುಸ್ವಾಮಿ ಹಾಗೂ ಇತರರು ಇದ್ದರು.

ಗಾಂಧಿ ಜಯಂತಿ ಪ್ರಯುಕ್ತ ನಗರ ಪಾಲಿಕೆಯಿಂದ ಸ್ವಚ್ಛತೆ, ನೈರ್ಮಲ್ಯ, ಆರೋಗ್ಯ, ಜಲಶಕ್ತಿ, ಪರಿಸರ ಹಾಗೂ ಹೊಗೆರಹಿತ ಅಡುಗೆ ಮನೆ ಮುಂತಾದವುಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ಅರಿವು ಮೂಡಿಸಲು ಪ್ರತಿಜ್ಞಾವಿಧಿ ಬೋಧಿಸಲಾಯಿತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಬಹುಮಾನ ವಿತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net