ಕೊಡ್ಲಮೊಗರು ಶಾಲೆಯಲ್ಲಿ ಸರ್ವಧರ್ಮ ಪ್ರಾರ್ಥನೆ

gandhi
Published on

ಕಾಸರಗೋಡು: ವರ್ಕಾಡಿ ಕೊಡ್ಲಮೊಗರು ಶ್ರೀ ವಾಣಿ ವಿಜಯ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಮಜೀದ್ ಉದ್ಘಾಟಿಸಿದರು. ಉಪಾಧ್ಯಕ್ಷ ಮೋಹನ್ ಮಾಸ್ಟರ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಸತ್ಯಶಂಕರ್ ನೇತೃತ್ವದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಶಿಕ್ಷಕಿ ಕೃಷ್ಣವೇಣಿ ಸ್ವಾಗತಿಸಿದರು. ಪೂರ್ಣಿಮಾ ನಿರೂಪಿಸಿದರು. ಉದಯಕುಮಾರ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net