ಗಾಂಧೀಜಿ, ಲಾಲ್ ಬಹಾದೂರ್ ಶಾಸ್ತ್ರಿ ಜಯಂತಿ ಆಚರಣೆ

02-10-25--krs1
Published on

ಕೆ.ಆರ್.ಸಾಗರ: ಕಾವೇರಿ ನೀರಾವರಿ ನಿಗಮ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದೂರ್ ಶಾಸ್ತ್ರಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾವೇರಿ ನೀರಾವರಿ ನಿಗಮದ ಕಾರ್ಯಪಾಲ ಇಂಜಿನಿಯರ್ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದೂರ್ ಶಾಸ್ತ್ರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಕೆ.ಅರ್.ಸಾಗರ ಕಾವೇರಿ ನೀರಾವರಿ ನಿಗಮ ಸಹಾಯಕ ಇಂಜಿನಿಯರ್ ಅಭಿಲಾಷ್, ಗಾಂಧೀಜಿ ತತ್ವಗಳನ್ನು ನಾವು ಅಳವಡಿಸಿಕೊಳ್ಳಬೇಕು. ಇತ್ತೀಚೆಗೆ ಯುವ ಸಮೂಹ ಗಾಂಧೀಜಿಯ ಕೊಡುಗೆಗಳನ್ನು ಸ್ಮರಿಸುವುದನ್ನು ಮರೆಯುತ್ತಿದ್ದಾರೆ. ದೇಶಕ್ಕೆ ಸ್ವಾತಂತ್ರೃ ತಂದು ಕೊಟ್ಟ ವೀರರ ಬಗ್ಗೆ ಅವರಿಗೆ ತಿಳಿಸಬೇಕು ಎಂದರು.

ಕೆ.ಆರ್.ಸಾಗರ ಯೋಜನೆ ಶಾಖೆ ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ನಾಗೇಶ್, ಜೈಪ್ರಕಾಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net