

ಯಳಂದೂರು: ಶಾಸಕ ಎ.ಆರ್.ಕೃಷ್ಣಮೂರ್ತಿ ನೇತೃತ್ವದಲ್ಲಿ ಬುಧವಾರ ಗಾಂಧಿ ಜಯಂತಿ ನಿಮಿತ್ತ ಪಟ್ಟಣದ ನಾಡಮೇಗಲಮ್ಮ ದೇಗುಲದಿಂದ ಗಾಂಧಿ ಸರ್ಕಲ್ ಬಳಿ ಇರುವ ಬ್ಲಾಕ್ ಕಾಂಗ್ರೆಸ್ ಕಚೇರಿವರೆಗೆ ಗಾಂಧಿ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ ಚಾಲನೆ ನೀಡಿ ಮಾತನಾಡಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ವಿಶ್ವಕಂಡ ಶ್ರೇಷ್ಠ ಸಂತ. ಶಾಂತಿಧೂತರಾಗಿದ್ದ ಇವರು ದೇಶಕ್ಕೆ ಅಹಿಂಸೆಯ ಮೂಲಕ ಸ್ವಾತಂತ್ರೃ ತಂದುಕೊಟ್ಟ ಮಹಾನ್ ನಾಯಕ. ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡಲು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಜಗತ್ತಿಗೆ ಶಾಂತಿ ಸಂದೇಶ ಸಾರಿದ ಮಹಾನ್ ನಾಯಕರಾಗಿದ್ದರು. ಇವರ ತತ್ವಾದರ್ಶಗಳು ಇಂದಿಗೆ ಪ್ರಸ್ತುತ ಎಂದರು.
ಇದರೊಂದಿಗೆ ದೇಶ ಕಂಡ ಪ್ರಾಮಾಣಿಕ ರಾಜಕಾರಣಿ ಲಾಲ್ ಬಹಾದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಆಚರಿಸುತ್ತಿದ್ದೇವೆ. ಕೃಷಿ ಕ್ರಾಂತಿಯ ಮೂಲಕ ಜೈ ಜವಾನ್, ಜೈ ಕಿಸಾನ್ ಘೋಷಣೆ ಕೂಗಿ ದೇಶದ ಅಂದಿನ ಅರ್ಥಿಕ ಪರಿಸ್ಥಿತಿ ನೀಗಿಸಲು ಪ್ರಾಮಾಣಿಕವಾಗಿ ಶ್ರಮಿಸಿದ ಮಹಾನ್ ನಾಯಕ ಎಂದು ಹೇಳಿದರು.
ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ, ಗ್ಯಾರಂಟಿ ಯೋಜನೆಗಳು ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಜಿಪಂ ಮಾಜಿ ಉಪಾಧ್ಯಕ್ಷ ಜೆ.ಯೋಗೇಶ್, ಪಪಂ ಅಧ್ಯಕ್ಷೆ ಲಕ್ಷ್ಮೀ ಮಲ್ಲು ಸದಸ್ಯರಾದ ಮಹೇಶ್, ವೈ.ಜಿ. ರಂಗನಾಥ, ಮಂಜು, ಬಿ.ರವಿ, ಲಿಂಗರಾಜಮೂರ್ತಿ, ಶ್ರೀಕಂಠಸ್ವಾಮಿ, ಮಾಜಿ ಸದಸ್ಯ ಜೆ.ಶ್ರೀನಿವಾಸ್, ಗೌಡಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ರವಿ, ಭಾರತ್ ಸೇವಾದಳದ ಅಧ್ಯಕ್ಷ ಜಯರಾಜು, ದೊಡ್ಡಯ್ಯ, ನಂಜುಂಡಸ್ವಾಮಿ, ಪ್ರಭುಶಂಕರ್, ಮಲ್ಲು ಇದ್ದರು.