

ವಿಜಯಪುರ: ಜಿಲ್ಲಾಡಳಿತ ವತಿಯಿಂದ ಅ. 2 ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲಬಾಹಾದೂರ್ ಶಾಸಿಜಿ ಜಯಂತಿ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಗ್ಗೆ 7.15 ಕ್ಕೆ ನಗರದ ಸೈನಿಕ ಶಾಲೆ ಬಳಿಯ ಲಾಲಬಹಾದೂರ್ ಶಾಸಿಜಿ ಪ್ರತಿಮೆ ಹಾಗೂ 7.30ಕ್ಕೆ ನಗರದ ಗಾಂಧಿವೃತ್ತದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ, 8 ಗಂಟೆಗೆ ನಗರದ ಜಲನಗರ ರಸ್ತೆಯಲ್ಲಿರುವ ಬುದ್ಧ ವಿಹಾರದಿಂದ ಗಾಂಧಿ ಭವನದವರೆಗೆ ಸ್ವಚ್ಛತಾ ನಡಿಗೆ, 8.45ಕ್ಕೆ ನಗರದ ಜಿಪಂ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಧ್ವಜಾರೋಹಣ, 9 ಗಂಟೆಗೆ ಗಾಂಧಿ ಭವನದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಗಾಂಧೀಜಿ ಪ್ರಬಂಧ ಸ್ಪರ್ಧೆ ವಿಜೇತರು: ಗಾಂಧಿ ಜಯಂತಿ ನಿಮಿತ್ತ ವಿದ್ಯಾರ್ಥಿ, ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ ಚಳವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ&ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಒಟ್ಟು 579 ಶಾಲೆಗಳ 8198 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರೌಢಶಾಲಾ ವಿಭಾಗದಲ್ಲಿ ವಿಜಯಪುರದ ಜಲನಗರ ಸರ್ಕಾರಿ ಪ್ರೌಢಶಾಲೆ 10ನೇ ತರಗತಿ ವಿದ್ಯಾರ್ಥಿನಿ ಅನ್ನಪೂರ್ಣ ಪೂಜಾರಿ ಪ್ರಥಮ, ಇಂಡಿ ತಾಲೂಕಿನ ನಾದ ಕೆಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಸೃಷ್ಟಿ ಹಳೇಮನಿ ದ್ವೀತಿಯ, ಸಿಂದಗಿ ತಾಲೂಕಿನ ಕೆರೂಟರಗಿಯ ಆರ್ಎಂಎಸ್ಎ ಪ್ರೌಢಶಾಲೆ ವಿದ್ಯಾರ್ಥಿನಿ ಶ್ರೇಯಾ ಪಾಟೀಲ ತೃತೀಯ ಸ್ಥಾನ ಪಡೆದಿದ್ದಾರೆ.ಪ.ಪೂ. ವಿಭಾಗದಲ್ಲಿ ಕೊಲ್ಹಾರ ತಾಲೂಕಿನ ಕೂಡಗಿ ಸರ್ಕಾರಿ ಪ.ಪೂ. ಕಾಲೇಜಿನ ಗೌರಿ ತೆಲಗಿ ಪ್ರಥಮ, ವಿಜಯಪುರ ನಗರದ ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜಿನ ಲಕ್ಷಿ$್ಮ ಮಾಳೆ ದ್ವೀತಿಯ ಹಾಗೂ ವಿಜಯಪುರ ಸಿಕ್ಯಾಬ್ ಮಹಿಳಾ ಪ.ಪೂ. ಕಾಲೇಜಿನ ಚೇತನಾ ಬಗಲಿ, ಬಬಲೇಶ್ವರ ತಾಲೂಕಿನ ಅರ್ಜುಣಗಿ ಸರ್ಕಾರಿ ಪ.ಪೂ. ಕಾಲೇಜಿನ ಮೇಘಾ ಕೋಟ್ಯಾಳ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದಲ್ಲಿ ವಿಜಯಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಐಶ್ವರ್ಯ ರಜಪೂತ ಪ್ರಥಮ, ಝಳಕಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸೌಮ್ಯ ಬಿರಾದಾರ ದ್ವೀತಿಯ ಹಾಗೂ ದೇವರಹಿಪ್ಪರಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಧಿಕಾ ಧರ್ಮಶೆಟ್ಟಿ ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾತ್ಮಾ ಗಾಂಧಿ ಪ್ರತಿಮೆ