ಹೂತಗೆರೆ ಗ್ರಾಪಂನಲ್ಲಿ ಗಾಂಧೀಜಿ, ಶಾಸ್ತ್ರಿ ಜನ್ಮ ದಿನಾಚರಣೆ

02M.D.R.2
Published on

ಮದ್ದೂರು: ರಾಷ್ಟ್ರಪಿತ ಮಹಾತ್ಮಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹಾದೂರ್ ಶಾಸ್ತ್ರಿ ಅವರ ತತ್ವಾದರ್ಶಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯ ಬೆಟ್ಟಗೌಡ ತಿಳಿಸಿದರು.

ತಾಲೂಕಿನ ಹೂತಗೆರೆ ಗ್ರಾಪಂನಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹಾದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಇಬ್ಬರು ಮಹನೀಯರು ನಿಸ್ವಾರ್ಥ ಮನೋಭಾವದಿಂದ ಹೋರಾಟ ಮಾಡಿ ರಾಷ್ಟ್ರಕ್ಕೆ ತಮ್ಮದೆಯಾದ ಕೊಡುಗೆ ನೀಡಿದ್ದಾರೆ. ಇಂತಹ ಮಹಾನ್ ವ್ಯಕ್ತಿಗಳು ನಮ್ಮ ಮಣ್ಣಿನಲ್ಲಿ ಹುಟ್ಟಿರುವುದು ನಮ್ಮಗೆಲ್ಲ ಹೆಮ್ಮಯ ವಿಷಯವಾಗಿದೆ ಎಂದು ಬಣ್ಣಿಸಿದರು.

ಗ್ರಾಪಂ ಸದಸ್ಯ ರವಿಕುಮಾರ್ ಮಾತನಾಡಿ, ಇಬ್ಬರು ಮಹಾನ್ ವ್ಯಕ್ತಿಗಳ ಹುಟ್ಟುಹಬ್ಬದ ಅಂಗವಾಗಿ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದರು. ಗ್ರಾಪಂ ಅಧ್ಯಕ್ಷೆ ಶಾರದಾ, ಸದಸ್ಯ ಕೆ.ಆರ್.ಶ್ರೀಧರ್, ರವಿಕುಮಾರ್, ಬೆಟ್ಟಸ್ವಾಮಿ, ಪಿಡಿಒ ಮಧುಸೂದನ್, ಸಿಬ್ಬಂದಿ ನಾರಾಯಣ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net