ಗಾಂಧಿಪುರ ಕಾಲೇಜಲ್ಲಿ ವಿಶ್ವ ಹೆಪಟೈಟಸ್ ದಿನಾಚರಣೆ

Chilly
Published on

ಹಾವೇರಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಸಹಯೋಗದಲ್ಲಿ ಗಾಂಧಿಪುರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ವಿಶ್ವ ಹೆಪಟೈಟಸ್ ದಿನಾಚರಣೆ ಕಾರ್ಯಕ್ರಮ ಜರುಗಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ, ವಿಶ್ವ ಹೆಪಟೈಟಿಸ್ ದಿನದ ಪೋಸ್ಟರ್ ಬಿಡುಗಡೆಗೊಳಿಸಿದರು.
ಜಿಲ್ಲಾಸ್ಪತ್ರೆಯ ತಜ್ಞ ವೈದ್ಯ ಡಾ.ವಿಶ್ವನಾಥ ಸಾಲಿಮಠ ಉಪನ್ಯಾಸ ನೀಡಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಪ್ರಾಚಾರ್ಯ ಡಾ.ಡಿ.ಟಿ.ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕ್ಷಯರೋಗ ಹಾಗೂ ಏಡ್ಸ್ ನಿಯಂತ್ರಣಾಧಿಕಾರಿ ಡಾ.ನೀಲೇಶ.ಎಂ.ಎನ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ. ಡಾ.ವಿ.ಜಯಲಕ್ಷ್ಮೀ, ವಿರಾಜ ಸುಣಗಾರ, ಮಂಜುನಾಥ ಹುಟ್ಟಿ, ಮಂಜುನಾಥ.ಟಿ.ಬಿ., ಉಮಾಪತಿ.ಬಿ.ಎಸ್., ಮುಬಾರಕ್, ನಿಂಗಪ್ಪ ಎಚ್., ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net