

ಮಡಿಕೇರಿ: ರಾಷ್ಟ್ರ ಮಟ್ಟದ ದೇಹದಾಡ್ಯ ಸ್ಪರ್ಧೆಯಲ್ಲಿ ಕೊಡಗಿನ ಗಣೇಶ್ ಗಮನಾರ್ಹ ಸಾಧನೆ ಮಾಡಿದ್ದು, ಚಿನ್ನ ಮತ್ತು ಕಂಚು ಗೆದ್ದಿದ್ದಾರೆ.
ಬೆಂಗಳೂರಿನಲ್ಲಿ ಹೊಸಕೋಟೆ ಹೋಬಳಿಪುರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವರ್ಲ್ಡ್ ಫಿಟ್ನೆಸ್ ಫೆಡರೇಷನ್ ರಾಯಲ್ ಕ್ಲಾಸಿಕ್ -೨೦೨೩ ದೇಹದಾಡ್ಯ ಸ್ಪರ್ಧೆಯಲ್ಲಿ ೫೫ ಕೆ.ಜಿ ವಿಭಾಗದಲ್ಲಿ ಗಣೇಶ್ ದ್ವಿತೀಯ ಸ್ಥಾನ ಪಡೆದು, ಮಿಸ್ಟರ್ ಕರ್ನಾಟಕ ಬಿರುದಿಗೆ ಪಾತ್ರರಾಗಿದ್ದಾರೆ.
ಚೆನ್ನೈನಲ್ಲಿ ನಡೆದ ರಾಷ್ಟ್ರ ಮಟ್ಟದ ದೇಹದಾಡ್ಯ ಐಕಾನ್ ಇಂಡಿಯಾ ಸ್ಪರ್ಧೆಯಲ್ಲಿ ನ್ಯಾಚುರಲ್ ದೇಹದಾಡ್ಯ ಮುಕ್ತ ವಿಭಾಗದಲ್ಲಿ ಒಂದು ಚಿನ್ನ ಮತ್ತು ಒಂದು ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ತನ್ನ ಕ್ರೀಡಾ ಸಾಧನೆಗೆ ಪ್ರೋತ್ಸಾಹ ನೀಡುತ್ತಿರುವ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಹಾಗೂ ಮಡಿಕೇರಿಯ ಸುರಭಿ ಹೊಟೇಲ್ ಮಾಲೀಕರಿಗೆ ಗಣೇಶ್ ಧನ್ಯವಾದ ಸಲ್ಲಿಸಿದ್ದಾರೆ.