

ಕೋಟ: ಸ್ವಾತಂತ್ರ್ಯ ಪೂರ್ವದಲ್ಲಿ ಹುಟ್ಟಿಕೊಂಡ ಗಣೇಶೋತ್ಸವ ಈ ದೇಶದ ಐಕ್ಯತೆಯ ಸಂಕೇತವಾಗಿ ಧಾರ್ಮಿಕ ಪರಂಪರೆಯೊಂದಿಗೆ ವಿಶ್ವ ಪ್ರಸಿದ್ಧಿಯಾಗಿದೆ ಎಂದು ಸಾಹಿತಿ ಎ.ಎಸ್.ಎನ್.ಹೆಬ್ಬಾರ್ ಹೇಳಿದರು.
ಕೋಟದ ಅಮೃತೇಶ್ವರಿ ದೇಗುಲದಲ್ಲಿ ಕೋಟದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸುವರ್ಣ ಸಂಭ್ರಮದ ಸವಾರೋಪ ಸವಾರಂಭ ಉದ್ಘಾಟಿಸಿ ವಾತನಾಡಿದರು.
ಸಮಿತಿ ಗೌರವಾಧ್ಯಕ್ಷ ಆನಂದ್ ಸಿ.ಕುಂದರ್ ಅಧ್ಯಕ್ಷತೆ ವಹಿಸಿದ್ದರು. ಸುವರ್ಣ ಮಹೋತ್ಸವ ಅಂಗವಾಗಿ ಐವತ್ತು ಮಂದಿ ಸ್ಥಳೀಯ ಸಾಧಕರು ಹಾಗೂ ಚಿನ್ನ ಬೆಳ್ಳಿ ಆಭರಣ ನೀಡಿದ ದಾನಿಗಳನ್ನು ಗೌರವಿಸಲಾಯಿತು. ಗಣೇಶೋತ್ಸವ ಅಂಗವಾಗಿ ನಡೆದ ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುವಾನ ನೀಡಲಾಯಿತು.
ಪುರಮೆರವಣಿಗೆಯಲ್ಲಿ ಭಾಗಿಯಾಗುವ ಸದಸ್ಯರಿಗೆ ಉದ್ಯಮಿ ಉಮೇಶ್ ರಾಜ್ ಕೊಡುಗೆಯಾಗಿ ನೀಡಿದ ಟೀಶರ್ಟ್ನ್ನು ದೇಗುಲ ಆಡಳಿತ ಮಂಡಳಿ ಅಧ್ಯಕ್ಷ ಸತೀಶ್ ಎಚ್.ಕುಂದರ್ ಅನಾವರಣಗೊಳಿಸಿದರು.
ಕೋಟ ಪಡುಕರೆ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ರಾಜೇಂದ್ರ ಎಸ್.ನಾಯಕ್ ಶುಭಾಶಂಸನೆಗೈದರು.
ಮನೋವೈದ್ಯ ಡಾ.ಪ್ರಕಾಶ್ ತೋಳಾರ್, ಲಯನ್ಸ್ ಜಿಲ್ಲಾ ವಾಜಿ ಗವರ್ನರ್ ಸುರೇಶ್ ಪ್ರಭು, ಕೋಟತಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್ ಕುಂದರ್, ಕೋಟ ಮಹಾಲಿಂಗೇಶ್ವರ ದೇಗುಲ ಅಧ್ಯಕ್ಷ ಅನಂತಪದ್ಮನಾಭ ಐತಾಳ್, ಸಮಿತಿ ಅಧ್ಯಕ್ಷ ರವಾನಾಥ ಜೋಗಿ, ಉಪಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಉಪಸ್ಥಿತರಿದ್ದರು. ರಾಜಾರಾಮ ಐತಾಳ್ ಸ್ವಾಗಸಿದರು. ಸಮಿತಿ ಕಾರ್ಯದರ್ಶಿ ಚಂದ್ರ ಆಚಾರ್ ನಿರೂಪಿಸಿ, ವಂದಿಸಿದರು.