

ಹುಬ್ಬಳ್ಳಿ: ಇಲ್ಲಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗಳ ಮಹಾಮಂಡಳದ ವತಿಯಿಂದ ಬಹುಮಾನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಶ್ರೀ ಗಣಪತಿ ವಿಗ್ರಹಗಳ ಸಾಮೂಹಿಕ ವಿಸರ್ಜನೆ ಕಾರ್ಯಕ್ರಮ ಸೆ. 6ರಂದು ಸಂಜೆ 4ಕ್ಕೆ ನಗರದ ದುರ್ಗದಬೈಲ್ ನಲ್ಲಿ ಏರ್ಪಡಿಸಲಾಗಿದೆ.
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಮೂರುಸಾವಿರ ಮಠದ ಶ್ರೀ ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮಾಜಿ ಸಿಎಂ ಜಗದೀಶ ಶೆಟ್ಟರ್, ಶಾಸಕರಾದ ಪ್ರಸಾದ ಅಬ್ಬಯ್ಯ, ಮಹೇಶ ಟೆಂಗಿನಕಾಯಿ, ಉದ್ಯಮಿ ಜಿತೇಂದ್ರ ಮಜೇಥಿಯಾ, ರವೀಂದ್ರ ರೇವಣಕರ ಇತರರು ಪಾಲ್ಗೊಳ್ಳುವರು ಎಂದು ಮಹಾಮಂಡಳ ಗೌರವ ಕಾರ್ಯದರ್ಶಿ ಅಮರೇಶ ಹಿಪ್ಪರಗಿ ತಿಳಿಸಿದ್ದಾರೆ.