ಬಳ್ಳಾರಿ : ಜಿಲ್ಲೆಯ ಕಂಪ್ಲಿಯ ನಂ.15 ಗೋನಾಳ್ ಮತ್ತು ಕುಡತಿನಿ ವ್ಯಾಪ್ತಿಯ ಹೊನ್ನಳ್ಳಿ ಗ್ರಾಮದಲ್ಲಿ ಪ್ರಸ್ತಕ ಸಾಲಿನ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ನಿಷೇಧಿಸಲಾಗಿದೆ ಎಂದು ಡಿಸಿ ಜಿಲ್ಲಾಧಿಕಾರಿ ಪ್ರಶಾಂತ ಕುಮಾರ ಮಿಶ್ರಾ ಆದೇಶಿಸಿದ್ದಾರೆ.
ಈ ಎರಡು ಗ್ರಾಮಗಳಲ್ಲಿ ಪ್ರಕ್ಷದಬ್ಧ ವಾತಾವರಣ ನಿರ್ಮಾಣವಾಗಿದ್ದು, ದ್ವೇಷದ ಹಗೆತನವನ್ನು ಯಾವುದಾದರೊಂದು ರೀತಿಯಲ್ಲಿ ತೀರಿಸಿಕೊಳ್ಳಲು ಸಮಯ, ಸಂದರ್ಭಾನುಸಾರ ಕಾಯುತ್ತಿರುತ್ತಾರೆಂದು ಸಂಶಯ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
====