ದ.ಕ, ಉಡುಪಿ 19ರಂದು ಸಾರ್ವತ್ರಿಕ ರಜೆ

lord ganesha
Published on

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಗಣೇಶೋತ್ಸವಕ್ಕೆ ಸೆ.18ರ ಬದಲು ಸೆ.19ರಂದು ಸಾರ್ವತ್ರಿಕ ರಜೆ ಘೋಷಿಸಿ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಕರಾವಳಿ ಭಾಗದಲ್ಲಿ ಗಣೇಶ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳಲು ಬೇರೆ ಬೇರೆ ಭಾಗದಲ್ಲಿರುವ ಕರಾವಳಿಯ ಬಂಧುಗಳು ಮನೆಗೆ ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಗಣೇಶ ಹಬ್ಬದ ಆಚರಣೆ ಇರುವ ಸೆ.19ರಂದೇ ರಜೆ ನೀಡುವಂತೆ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಶಾಸಕರು ಮುಖ್ಯಮಂತ್ರಿಗೆ ಮನವಿ ಮಾಡಿದ್ದರು. ಜನರ ಧಾರ್ಮಿಕ ಭಾವನೆಗೆ ಅನುಕೂಲವಾಗುವಂತೆ ರಜೆ ನೀಡುವ ನಿರ್ಧಾರ ಕೈಗೊಳ್ಳುವಂತೆ ಜಿಲ್ಲಾಧಿಕಾರಿಯೇ ತೆಗೆದುಕೊಳ್ಳಬೇಕು ಎಂದು ಸರ್ಕಾರದ ಸಿಎಸ್ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net