ಗಣೇಶ ವಿಸರ್ಜನೆ ಮೆರವಣಿಗೆ ಅದ್ದೂರಿ

oppo_0
oppo_0
Published on

ಗೊರೇಬಾಳ: ಗೊರೇಬಾಳ ಕ್ಯಾಂಪಿನ ರಾಮಾಲಯದಲ್ಲಿ ಸ್ಥಾಪಿಸಿದ್ದ ಗಣೇಶ ಮೂರ್ತಿಯನ್ನು ಭಾನುವಾರ ಅದ್ದೂರಿ ಮೆರವಣಿಗೆ ನಡೆಸಿ ವಿಸರ್ಜಿಸಲಾಯಿತು. ಕಾರಟಗಿ ತಾಲೂಕಿನ ಸಿದ್ದಾಪುರದ ವೇಷಗಾರರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಯುವಕರು ಡಿ.ಜೆ. ಸಂಗೀತಕ್ಕೆ ಕುಣಿದು ಕುಪ್ಪಳಿಸಿದರು. ಮೆರವಣಿಗೆ ಗಂಗಾವತಿ-ರಾಯಚೂರು ರಾಜ್ಯ ಹೆದ್ದಾರಿಗೆ ಬಂದ ನಂತರ ಕೆಲ ಕಾಲ ಟ್ರಾಫಿಕ್ ಜಾಮ್ ಆಗಿತ್ತು. ಸುಗಮ ಸಂಚಾರಕ್ಕಾಗಿ ಪೊಲೀಸರು ಹರಸಾಹಸಪಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net