

ಸುಂಟಿಕೊಪ್ಪ: ಮಾದಾಪುರ ರಸ್ತೆಯ ಶ್ರೀ ವೃಕ್ಷೋದ್ಭವ ಶಕ್ತಿ ಗಣಪತಿ ದೇವಸ್ಥಾನದಲ್ಲಿ ಆ.26ರಂದು ಬೆಳಗ್ಗೆ 9.45 ರಿಂದ 10.40 ರವರೆಗೆ ಸಲ್ಲುವ ತುಲ ಲಗ್ನದಲ್ಲಿ ದೇವಸ್ಥಾನದ ಆವರಣದಲ್ಲಿ ಗೌರಿ ಪ್ರತಿಷ್ಠಾಪನೆ ನಡೆಯಲಿದೆ.
27ರಂದು ಬುಧವಾರ ಮಧ್ಯಾಹ್ನ 12 ಗಂಟೆಗೆ ಶ್ರೀ ಶಕ್ತಿ ಗಣಪತಿಗೆ ವಿಶೇಷ ಪೂಜೆ ಹಾಗೂ ಮಹಾ ಮಂಗಳಾರತಿ ನಡೆಯಲಿದೆ. ಅಂದು ಸಂಜೆ 5 ಗಂಟೆಗೆ ವಿವಿಧ ಪೂಜಾ ವಿಧಿವಿಧಾನಗಳ ನಂತರ ಹರದೂರು ಹೊಳೆಯಲ್ಲಿ ಗೌರಿಯನ್ನು ವಿಸರ್ಜಿಸಲಾಗುವುದೆಂದು ಶ್ರೀ ವೃಕ್ಷೋದ್ಭವ ಶಕ್ತಿ ಗಣಪತಿ ದೇವಸ್ಥಾನದ ಟ್ರಸ್ಟ್ ಕಾರ್ಯದರ್ಶಿ ಎ.ಲೋಕೇಶ್‌ಕುಮಾರ್ ತಿಳಿಸಿದ್ದಾರೆ.
ಕೊಡಗರಹಳ್ಳಿಯ ಶ್ರೀ ವಿಘ್ನೇಶ್ವರ ಸೇವಾ ಸಮಿತಿ ವತಿಯಿಂದ 7ನೇ ವರ್ಷದ ಉತ್ಸವ ಗೌರಿ- ಗಣೇಶೋತ್ಸವದ ಮೂರ್ತಿಯನ್ನು ಪ್ರತಿಷ್ಠಾಪಿಸಿ 3 ದಿನಗಳ ಕಾಲ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿದೆ ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.