ಗಣೇಶ ಚತುರ್ಥಿ ರಜೆ ಸೆ.19 ಕ್ಕೆ

IMG-20230916-WA0071
Published on

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿಯ ದಿನಾಂಕವನ್ನು ಬದಲಾಯಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅವರು ಶನಿವಾರ ಆದೇಶ ಹೊರಡಿಸಿದ್ದಾರೆ. ಸೆ.18 ರ ಬದಲು ಸೆ. 19 ರಂದು ರಜೆ ನೀಡಲಾಗಿದೆ.
ರಾಜ್ಯದಲ್ಲಿ ಸೆ.18 ರಂದು ಗಣೇಶ ಚತುರ್ಥಿಯ ರಜೆ ಘೋಷಿಸಲಾಗಿತ್ತು. ಆದರೆ, ಜಿಲ್ಲೆಯ ಭಾಗಶಃ ಜನರು ಪಂಚಾಂಗದ ಆಧಾರದ ಮೇಲೆ ಸೆ.19 ರಂದು ಗಣೇಶ ಚತುರ್ಥಿ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ರಜೆಯ ದಿನಾಂಕವನ್ನು ಬದಲಿಸಬೇಕು ಎಂದು ಶಾಸಕ ಸತೀಶ ಸೈಲ್ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದರು.


ಅದನ್ನು ಆಧರಿಸಿ ಜಿಲ್ಲಾಧಿಕಾರಿ ಅವರು ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದು ನಿರ್ದೇಶನ ಕೋರಿದ್ದರು. ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ ಪಿ.ಎನ್.ನಾಗಪ್ರಶಾಂತ ಅವರು ಜಿಲ್ಲಾಧಿಕಾರಿಗೆ ಮರು ಪತ್ರ ಬರೆದು, ಅವರು ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ರಜೆ ದಿನಾಂಕ ಬದಲಾಯಿಸಲು ನಿರ್ದೇಶಿಸಿದ್ದರು.

ಅದನ್ನಾಧರಿಸಿ ಜಿಲ್ಲೆಯ ಸರ್ಕಾರಿ, ಅರೆ ಸರ್ಕಾರಿ ಹಾಗೂ ಶೈಕ್ಷಣಿಕ ಸಂಸ್ಥೆಗಳಿಗೆ ಸೆ.19 ರಂದು ರಜೆ ನೀಡಿ, ಸೆ. 18 ಕರ್ತವ್ಯದ ದಿನ ಎಂದು ಡಿಸಿ ಘೋಷಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net