ಮಾದಾಪುರದಲ್ಲಿ ಸಂಭ್ರಮದ ಗಣೇಶೋತ್ಸವ

Ganesha festival in Madapur
Published on

ಮಾದಾಪುರ

ಇಲ್ಲಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಬಡಾವಣೆಯ ವಿನಾಯಕ ಮಿತ್ರ ಮಂಡಳಿ ವತಿಯಿಂದ ೨ನೇ ವರ್ಷದ ಗಣೇಶೋತ್ಸವವನ್ನು ಮಂಗಳವಾರ (ಸೆ.೧೯) ಅದ್ಧೂರಿಯಾಗಿ ಆಚರಿಸಲಾಯಿತು. ಬೆಳಗ್ಗೆ ಗಣಪತಿಯನ್ನು ಪ್ರತಿಷ್ಠಾಪನೆ ನಂತರ ಮಧ್ಯಾಹ್ನ ಸಾರ್ವಜನಿಕರಿಗೆ ಅನ್ನದಾನ ಏರ್ಪಡಿಸಲಾಗಿತ್ತು. ಸಂಜೆ ಭವ್ಯ ಮಂಟಪದಲ್ಲಿ ನಗರ ಪ್ರದಕ್ಷಿಣೆ ನಂತರ ಮಾದಾಪುರ ಹೊಳೆಯಲ್ಲಿ ಗಣಪತಿ ಮೂರ್ತಿ ವಿಸರ್ಜಿಸಲಾಯಿತು. ಮಿತ್ರ ಮಂಡಳಿ ಅಧ್ಯಕ್ಷ ಹರೀಶ್, ಉಪಾಧ್ಯಕ್ಷ ಉಮೇಶ್ ಪೂಜಾರಿ, ಕಾರ್ಯದರ್ಶಿ ಚೇತನ್ ಕೆ. ಎಂ., ಸಹಕಾರ್ಯದರ್ಶಿ ಶಶಿಕುಮಾರ್, ಖಜಾಂಚಿ ಅನಿಲ್, ಮಣಿ ಗೌಂಡರ್ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net