

ಸುಂಟಿಕೊಪ್ಪ: ಮಾದಾಪುರ ವಿನಾಯಕ ಮಿತ್ರ ಮಂಡಳಿಯ ವತಿಯಿಂದ 2ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವದ ಅಂಗವಾಗಿ ಬೆಳಗ್ಗೆ 9.30 ಗಂಟೆಗೆ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿವಿಧ ಪೂಜಾ ವಿಧಾನಗಳನ್ನು ನೆರವೇರಿಸುವ ಮೂಲಕ ಮಧ್ಯಾಹ್ನ್ನ 12.30 ಗಂಟೆಗೆ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ನಡೆಯಿತು.
ಸಂಜೆ 5 ಗಂಟೆಗೆ ಅಲಂಕೃತ ಮಂಟಪದಲ್ಲಿ ಉತ್ಸವ ಮೂರ್ತಿ ಗಣೇಶನನ್ನು ಮಾದಾಪುರ ಪಟ್ಟಣದಲ್ಲಿ ಶೋಭಾಯಾತ್ರೆ ನಡೆಸಿ ನಂತರ ಮಾದಾಪುರ ಹೊಳೆಯಲ್ಲಿ ವಿಸರ್ಜಿಸಲಾಯಿತು. ವಿನಾಯಕ ಮಿತ್ರ ಮಂಡಳಿಯ ಅಧ್ಯಕ್ಷ ಹರೀಶ್, ಉಪಾಧ್ಯಕ್ಷ ಉಮೇಶ್ ಪೂಜಾರಿ, ಕಾರ್ಯದರ್ಶಿ ಕೆ.ಎಂ.ಚೇತನ್, ಸಹಕಾರ್ಯದರ್ಶಿ ಶಶಿಕುಮಾರ್, ಖಜಾಂಚಿ ಅನಿಲ್, ಉಪ ಖಜಾಂಚಿ ಮಣಿಗೌಂಡರ್,ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು.