ಗಣೇಶ ಮೂರ್ತಿ ತಯಾರಿಸಿದ ವಿದ್ಯಾರ್ಥಿಗಳು

17SPT5
ಸೋಮವಾರಪೇಟೆ ತಾಲೂಕಿನ ಐಗೂರು ಪ್ರೌಢಶಾಲೆ ಹಾಗೂ ಇಕೋ ಕ್ಲಬ್ ವತಿಯಿಂದ ಶನಿವಾರ ಪರಿಸರಸ್ನೇಹಿ ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳ ಪ್ರದರ್ಶನ ನಡೆಯಿತು. ಯಶವಂತ್ ಕುಮಾರ್, ರಂಜಿನಿ ಇದ್ದರು.
Published on

ಸೋಮವಾರಪೇಟೆ: ತಾಲೂಕಿನ ಐಗೂರು ಪ್ರೌಢಶಾಲೆ ಹಾಗೂ ಭುವನಕ್ಕೊಂದು ಸದನ ಇಕೋ ಕ್ಲಬ್ ವತಿಯಿಂದ ಶನಿವಾರ ಪರಿಸರ ಸ್ನೇಹಿ ಗಣೇಶೋತ್ಸವದ ಅಂಗವಾಗಿ ವಿದ್ಯಾರ್ಥಿಗಳು ಶಾಲೆಯಲ್ಲಿಯೇ ಮಣ್ಣಿನ ಗಣೇಶ ಮೂರ್ತಿಗಳನ್ನು ತಯಾರಿಸಿದರು.

ವಿದ್ಯಾರ್ಥಿಗಳು ಸ್ವತಃ ಪರಿಸರ ಗಣೇಶನ ಮೂರ್ತಿಯನ್ನು ತಯಾರಿಸುವುದರ ಮೂಲಕ ಪರಿಸರಕ್ಕೆ ಯಾವುದೇ ಧಕ್ಕೆಯಾಗದಂತೆ ಪರಿಸರ ಸ್ನೇಹಿ ನೈಸರ್ಗಿಕ ಜೇಡಿ ಮಣ್ಣಿನ ಗಣೇಶನ ಮೂರ್ತಿಗಳನ್ನು ಪ್ರದರ್ಶನಕ್ಕೆ ಇಟ್ಟರು. ಅತ್ಯುತ್ತಮವಾಗಿ ಮೂರ್ತಿ ತಯಾರಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ವಿಜ್ಞಾನ ಶಿಕ್ಷಕಿ ಎಸ್.ಎಸ್.ರಂಜಿನಿ ಮಾತನಾಡಿ, ನಾವು ಮಾಲಿನ್ಯ ರಹಿತ ಹಬ್ಬದ ಆಚರಣೆಗೆ ಒತ್ತು ನೀಡುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕೆಂದು ಹೇಳಿದರು. ಮುಖ್ಯ ಶಿಕ್ಷಕ ಯಶವಂತ್ ಕುಮಾರ್, ಸಹ ಶಿಕ್ಷಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net