

ಗಂಗೊಳ್ಳಿ: ಇಲ್ಲಿನ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಗಣಪತಿಯ ವಿಗ್ರಹದ ಜಲಸ್ತಂಭನ ಕಾರ್ಯಕ್ರಮ ಬುಧವಾರ ನಡೆಯಿತು. ದೇವಸ್ಥಾನದಿಂದ ಗಂಗೊಳ್ಳಿ ಬಂದರು ಕಚೇರಿ ತನಕ ಮೆರವಣಿಗೆಯಲ್ಲಿ ಗಣೇಶನ ವಿಗ್ರಹ ಕೊಂಡೊಯ್ದಿದ್ದು, ಪಂಚಗಂಗಾವಳಿ ನದಿಯಲ್ಲಿ ಜಲಸ್ತಂಭನ ಮಾಡಲಾಯಿತು. ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದವು. ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್, ಜಿ.ವೆಂಕಟೇಶ ನಾಯಕ್, ಗಣೇಶೋತ್ಸವ ಸಮಿತಿ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.