ಬೇಟೋಳಿಯಲ್ಲಿ ಗಣೇಶ ಮೂರ್ತಿ ವಿಸರ್ಜನೆ

Oplus_131074
ಉತ್ಸವ ಮೂರ್ತಿಯ ಮೆರವಣಿಗೆಯಲ್ಲಿ ಗಮನ ಸೆಳೆದ ಭಜನೆ ಕುಣಿತ.
Published on

ವಿರಾಜಪೇಟೆ: ಸಮೀಪದ ಬೇಟೋಳಿ ರಾಮನಗರದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆವರಣದಲ್ಲಿರುವ ಶ್ರೀ ಗಣಪತಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನೋತ್ಸವ ಸಂಭ್ರಮದಿಂದ ನಡೆಯಿತು.

42ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಏಳು ದಿನಗಳ ಕಾಲ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅನ್ನದಾನ ಜರುಗಿದ್ದವು. ಶುಕ್ರವಾರ ಪೂಜಾ ಕಾರ್ಯಕ್ರಮಗಳು ನಡೆದು ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಿಸಲಾಯಿತು. ನಂತರ ಧಾರ್ಮಿಕ ಕಾರ್ಯಕ್ರಮದ ಬಳಿಕ ಗೌರಿ ಗಣೇಶ ಮೂರ್ತಿಯನ್ನು ಹೂವಿನ ಅಲಂಕೃತ ಮಂಟಪದಲ್ಲಿ ಪ್ರತಿಷ್ಠಾಪಿಸಿ ಶೋಭಯಾತ್ರೆಯ ಮೂಲಕ ತೆರಳಿ ಸಮೀಪದ ಮೂಲೆ ಅಂಗಡಿ ಹೊಳೆಯಲ್ಲಿ ವಿಸರ್ಜನಾ ಕಾರ್ಯವನ್ನು ನಡೆಸಲಾಯಿತು. ಶೋಭಾಯಾತ್ರೆಯ ಸಂದರ್ಭದಲ್ಲಿ ರುದ್ರಂ ಚಂಡೆ ಬಳಗದವರಿಂದ ಚಂಡೆ ಸೇವೆ ಹಾಗೂ ದಕ್ಷಿಣ ಕನ್ನಡದ ಕಲಾವಿದರು, ಸ್ಥಳೀಯ ಕಲಾವಿದರಿಂದ ಆಕರ್ಷಕವಾಗಿ ಕುಣಿತ ಭಜನೆಯು ನಡೆಯಿತು. ದೇವಸ್ಥಾನದ ಆಡಳಿತ ಮಂಡಳಿಯವರು, ಗ್ರಾಮಸ್ಥರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net