

ಕೋಟ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಮಾಬುಕಳ 15ನೇ ವರ್ಷದ ಗಣೇಶ ಉತ್ಸವವನ್ನು ಧೂಳಂಗಡಿ ಶಾಲಾ ಮೈದಾನದಲ್ಲಿ ಆಚರಿಸಲಾಯಿತು.
ಧಾರ್ಮಿಕ ಸಭೆಯಲ್ಲಿ ಸಮಿತಿ ಅಧ್ಯಕ್ಷ ಆನಂದ ಗಾಣಿಗ ಅಧ್ಯಕ್ಷತೆ ವಹಿಸಿದ್ದರು. ವಿದ್ವಾನ್ ಹೆರ್ಗ ಹರಿಪ್ರಸಾದ ಭಟ್ಟ ಧಾರ್ಮಿಕ ಪ್ರವಚನ ಮಾಡಿದರು. ಸಮಿತಿ ಗೌರವ ಸಲಹೆಗಾರ ಶಿವರಾಮ ಶ್ರೀಯಾನ್ ಮಾತನಾಡಿದರು.
ಹಿರಿಯ ನಿವೃತ್ತ ಮುಖ್ಯಶಿಕ್ಷಕ ರಾಮದೇವಹಂದೆ ಹಾಗೂ ಐರೋಡಿ ಬಾಳ್ಕುದ್ರು ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣಪ್ಪ ಬೆನ್ನು ಅವರನ್ನು ಸನ್ಮಾನಿಸಲಾಯಿತು. ಸ್ಥಳೀಯ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ದೂಳಂಗಡಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ರೇಖಾ ಉಡುಪ ಉಪಸ್ಥಿತರಿದ್ದರು. ಸಮಿತಿ ಗೌರವಾಧ್ಯಕ್ಷ ಶ್ರೀಪತಿ ಅಧಿಕಾರಿ ಸ್ವಾಗತಿಸಿದರು. ಸಮಿತಿ ಉಪಾಧ್ಯಕ್ಷ ಉಮೇಶ ಕುಂದರ ಬಹುಮಾನಿತರ ಪಟ್ಟಿ ವಾಚಿಸಿದರು. ಆನಂದ ಗಾಣಿಗ ಎಲ್‌ಐಸಿ ಮತ್ತು ಹರೀಶ ಮೈಯ್ಯ ಸನ್ಮಾನ ಪತ್ರ ವಾಚಿಸಿದರು. ಖಜಾಂಚಿ ಶೇಖರ ಮೆಂಡನ್ ವಂದಿಸಿದರು.