

ಉಪ್ಪಿನಂಗಡಿ: ಇಲ್ಲಿನ ಹಳೆಗೇಟು ಸಮೀಪದ ಮೀನಿನ ಅಂಗಡಿಗೆ ಸೋಮವಾರ ರಾತ್ರಿ ಮುಸುಕುಧಾರಿ ದುಷ್ಕರ್ಮಿಗಳ ತಂಡ ನುಗ್ಗಿ ಅಂಗಡಿಯಲ್ಲಿದ್ದ ಮೂವರಿಗೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದೆ.
ದಾಳಿಯಿಂದ ಮೋಹನ್ ಶೆಟ್ಟಿ, ಅಶೋಕ್ ಶೆಟ್ಟಿ ಹಾಗೂ ಮಹೇಶ್ ಪೆರಿಯಡ್ಕ ಅವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದುಷ್ಕರ್ಮಿಗಳು ಬೈಕ್ ಮತ್ತು ಕಾರುಗಳಲ್ಲಿ ಬಂದು ಹಲ್ಲೆ ನಡೆಸಿದ್ದಾರೆ.
ಭಾನುವಾರ ರಾತ್ರಿ ಇಳಂತಿಲ ಗ್ರಾಮದ ಅಂಡೆತ್ತಡ್ಕ ಎಂಬಲ್ಲಿ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಐವರ ಮೇಲೆ ಗುಂಪೊಂದು ತಲ್ವಾರಿನಲ್ಲಿ ಹಲ್ಲೆ ನಡೆಸಿ ಪರಾರಿಯಾಗಿತ್ತು. ಈ ಪ್ರಕರಣಕ್ಕೆ ಪ್ರತಿಕಾರವಾಗಿ ದಾಳಿ ನಡೆದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಸ್ಥಿತಿಯ ಮೇಲೆ ನಿಗಾವಿರಿಸಿದ್ದಾರೆ.