ಗಂಗಾಧರ್ ರಾವ್ ದೇಶಪಾಂಡೆ ಸ್ಮಾರಕ ಭವನ, ಫೋಟೋ ಗ್ಯಾಲರಿ ಉದ್ಘಾಟಿಸಿ ಸಿಎಂ

IMG20241226144354.jpg
Published on

ಬೆಳಗಾವಿ: "ಗಾಂಧಿ ಭಾರತ" ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿಯ ರಾಮತೀರ್ಥ ನಗರದಲ್ಲಿ ಗುರುವಾರ (ಡಿ.26) ಗಂಗಾಧರ ದೇಶಪಾಂಡೆ ಅವರ ಸ್ಮಾರಕ ಭವನ‌ ಮತ್ತು ಛಾಯಾಚಿತ್ರ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.

ಸ್ಮಾರಕ ಭವನ ಅಂದಾಜು 15 ಗುಂಟೆ ಜಾಗೆಯಲ್ಲಿ 1.58 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ಸ್ಥಳದಲ್ಲಿ ಸ್ಮಾರಕ ಭವನ, ದೇಶಪಾಂಡೆ ಅವರ ಪುತ್ಥಳಿ, ಫೋಟೋ ಗ್ಯಾಲರಿ, ಆವರಣದ ಕಾಂಪೌಂಡ್, ತಂತಿಬೇಲಿ, ಪೇವರ್ಸ್ ಹಾಗೂ ಉದ್ಯಾನವನ ನಿರ್ಮಿಸಲಾಗಿದೆ.

ಈ ಸಂದರ್ಭದಲ್ಲಿ ಕಾನೂನು, ನ್ಯಾಯ, ಮಾನವ ಹಕ್ಕುಗಳ, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಹಾಗೂ ಶತಮಾನೋತ್ಸವ ಸಮಿತಿಯ ಅಧ್ಯಕ್ಷರು ಎಚ್.ಕೆ ಪಾಟೀಲ, ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರು ವೀರಪ್ಪ ಮೊಯ್ಲಿ, ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕ ಆಸೀಫ್(ರಾಜು)ಸೇಠ, ಚಿಕ್ಕೋಡಿ-ಸದಲಗಾ ಶಾಸಕ ಗಣೇಶ್ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಡಾ. ಧರಣಿ ದೇವಿ ಮಾಲಗತ್ತಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ , ಮಹಾನಗರ ಪಾಲಿಕೆ ಆಯುಕ್ತರಾದ ಶುಭಾ. ಬಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಜಂಟಿ ನಿರ್ದೇಶಕ ಕೆ. ಎಚ್ ಚನ್ನೂರು, ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net