ಒತ್ತಡ ನಿವಾರಣೆಗೆ ಯೋಗಾಭ್ಯಾಸ ಮಾಡಿ

15 gvt 04
Published on

ಗಂಗಾವತಿ: ಸದೃಢ ದೇಹ ಹಾಗೂ ಮಾನಸಿಕ ಒತ್ತಡ ನಿವಾರಣೆಗೆ ಪ್ರತಿದಿನ ಯೋಗಾಭ್ಯಾಸ ಮಾಡಬೇಕು ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

ಸ್ವಾಮಿ ವಿವೇಕಾನಂದ ಜಯಂತಿ ನಿಮಿತ್ತ ನಗರದ ಲಯನ್ಸ್ ಕ್ಲಬ್ ಆವರಣದ ಸಭಾಂಗಣದಲ್ಲಿ ಜಿಪಂ, ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಭಾನುವಾರ ಆಯೋಜಿಸಿದ್ದ ಯೋಗಾಥಾನ್-2023 ಅಭಿಯಾನ ಉದ್ಘಾಟಿಸಿ ಮಾತನಾಡಿದರು. ದೈನಂದಿನ ಬದುಕಿನಲ್ಲಿ ಒತ್ತಡ ನಿವಾರಣೆಗೆ ಯೋಗ ಪರಿಣಾಮಕಾರಿಯಾಗಿದೆ. ಮಕ್ಕಳು ಯೋಗಾಭ್ಯಾಸದಲ್ಲಿ ತೊಡಗಿಸಿಕೊಂಡರೆ ಏಕಾಗ್ರತೆ ಹೊಂದಲು ಸಾಧ್ಯ. ಮನಸ್ಸು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ ಎಂದರು.

ಬಿಇಒ ಸೋಮಶೇಖರಗೌಡ ತಿಪ್ಪನಾಳ್ ಮಾತನಾಡಿ, ಇಲಾಖೆ ವಿಶೇಷ ಯೋಜನೆ ರೂಪಿಸಿದ್ದು, ಸಂಪನ್ಮೂಲ ವ್ಯಕ್ತಿಗಳಿಂದ ಮಕ್ಕಳಿಗೆ ಯೋಗ ತರಬೇತಿ ನೀಡಲಾಗುತ್ತಿದೆ ಎಂದರು. ಯೋಗ ತರಬೇತುದಾರರಾದ ಶಾಂತವೀರಯ್ಯಸ್ವಾಮಿ ಗಂಧದಮಠ, ನೂಲ್ವಿ ಮಲ್ಲಿಕಾರ್ಜುನ, ರಘುನಾಥ ಪವಾರ್, ಕಸಾಪ ತಾಲೂಕಾಧ್ಯಕ್ಷ ಶ್ರೀನಿವಾಸ ಅಂಗಡಿ, ಆಯುಷ್ ಇಲಾಖೆ ವೈದ್ಯಾಧಿಕಾರಿ ಡಾ.ಭಾನುಪ್ರಕಾಶ, ದೈಹಿಕ ಶಿಕ್ಷಣ ಪರಿವೀಕ್ಷಕ ಕೆ.ರಂಗಸ್ವಾಮಿ ನಾಯಕ, ಲಯನ್ಸ್ ಪ್ರೌಢಶಾಲೆ ಮುಖ್ಯಶಿಕ್ಷಕ ಜಗನ್ನಾಥ ದಾಸ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net