ಅಂಜನಾದ್ರಿ ಅಭಿವೃದ್ಧಿಗೆ ರೂ. 20 ಕೋಟಿ; ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಕೆ, ಸೌಕರ್ಯ ಕಲ್ಪಿಸಲು ಬದ್ಧ

10112021 gangagavati KS eshwarappa visit to anjanadri hill
Published on

ಶೀಘ್ರ ಬಿಡುಗಡೆಗೆ ಕ್ರಮ ಎಂದ ಸಚಿವ ಕೆ.ಎಸ್.ಈಶ್ವರಪ್ಪ

ಗಂಗಾವತಿ: ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ರಾಜ್ಯ ಸರ್ಕಾರ 20 ಕೋಟಿ ರೂ. ಅನುದಾನ ೋಷಿಸಿದ್ದು, ಶೀಘ್ರ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಬುಧವಾರ ಪೂಜೆ ನೆರವೇರಿಸಿ ಮಾತನಾಡಿದರು. ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಭೆ ರದ್ದುಪಡಿಸಲಾಗಿದೆ. ವ್ಯಾಖ್ಯಾನ ಕೇಂದ್ರ, ರೋಪ್‌ವೇ ಸೇರಿದಂತೆ ವಿವಿಧ ಮೂಲ ಸೌಕರ್ಯಕ್ಕಾಗಿ ಅನುದಾನ ಕಾಯ್ದಿರಿಸಲಾಗಿದೆ. ಭಕ್ತರಿಗೆ ಅನುಕೂಲವಾಗುವಂತೆ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು.

ಅಭಿವೃದ್ಧಿ ಕಾಮಗಾರಿ ವ್ಯಾಪ್ತಿಯಲ್ಲಿ ಕಂದಾಯ, ಅರಣ್ಯ ಮತ್ತು ಖಾಸಗಿ ಭೂಮಿ ಇದ್ದು, ಬೆಂಗಳೂರಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಸಭೆ ಆಯೋಜಿಸಿ ಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗುವುದು. ವಿವಿಧ ಕಾರಣಗಳಿಂದ ಅಭಿವೃದ್ಧಿ ವಿಳಂಬವಾಗಿದ್ದು, ಇನ್ನು ಮುಂದೆ ಹಾಗಾಗದಂತೆ ಎಚ್ಚರ ವಹಿಸಲಾಗುವುದು. ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆಯಾಗದಂತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net