ಅಂಜನಾದ್ರಿ ಮೂಲ ಸೌಕರ್ಯ ಕಲ್ಪಿಸಿ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಮನವಿ

MANAVI SALIKE
ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಪದಾಧಿಕಾರಿಗಳು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್‌ಗೆ ಸೋಮವಾರ ಮನವಿ ಸಲ್ಲಿಸಿದರು. ಜಿಲ್ಲಾಧ್ಯಕ್ಷ ಪಂಪಣ್ಣನಾಯಕ, ಪದಾಧಿಕಾರಿಗಳಾದ ಮುತ್ತು, ಸಂಜೀವ, ಬಾಷಾ ಸಂಗಾಪುರ, ದೇವರಾಜ್ ಇತರರಿದ್ದರು.
Published on

ಗಂಗಾವತಿ: ತಾಲೂಕಿನ ಐತಿಹಾಸಿಕ ಅಂಜನಾದ್ರಿ ಬೆಟ್ಟದಲ್ಲಿ ಮೂಲ ಸೌಕರ್ಯ ಕಲ್ಪಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಪದಾಧಿಕಾರಿಗಳು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್‌ಗೆ ಸೋಮವಾರ ಮನವಿ ಸಲ್ಲಿಸಿದರು.

ಅಂಜನಾದ್ರಿ ಬೆಟ್ಟದ ಬಳಿ ಸಚಿವರನ್ನು ಭೇಟಿಯಾದ ಕಾರ್ಯಕರ್ತರು, ಭಕ್ತರ ಅನುಕೂಲಕ್ಕಾಗಿ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿದರು. ಜಿಲ್ಲಾಧ್ಯಕ್ಷ ಪಂಪಣ್ಣನಾಯಕ ಮಾತನಾಡಿ, ಹಿಂದುಗಳ ಪವಿತ್ರ ಕ್ಷೇತ್ರ ಅಂಜನಾದ್ರಿಗೆ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ಮೂಲ ಸೌಕರ್ಯಗಳ ಕೊರತೆಯಿದೆ.

ವಸತಿ, ಶೌಚಗೃಹ, ಸ್ನಾನ ಘಟ್ಟ ಸೇರಿ ಮೂಲ ಸೌಕರ್ಯ ಒದಗಿಸಬೇಕಿದ್ದು, ಅರ್ಚಕರ ಗೊಂದಲ ಬಗೆಹರಿಸಬೇಕು. ಪ್ರತಿ ಬಜೆಟ್‌ನಲ್ಲಿ ಅಂಜನಾದ್ರಿಗೆ 5 ಕೋಟಿ ರೂ. ಅನುದಾನ ಮೀಸಲಿಡಬೇಕು. ಅದರಂತೆ ಸಂಗಾಪುರ, ಆನೆಗೊಂದಿ, ಸಣಾಪುರ, ಮಲ್ಲಾಪುರ ಗ್ರಾಮಗಳಲ್ಲಿ ಗಾಂವಠಾಣ ಸಮಸ್ಯೆಯಿದ್ದು, ಸ್ವಾಮಿತ್ವ ಯೋಜನೆ ಅನುಷ್ಠಾನಕ್ಕೆ ಅಡ್ಡಿಯಾಗಿದೆ ಎಂದರು.

ಪದಾಧಿಕಾರಿಗಳಾದ ಮುತ್ತು, ಸಂಜೀವ, ಬಾಷಾ ಸಂಗಾಪುರ, ದೇವರಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net