ಬಿಜೆಪಿ, ಕಾಂಗ್ರೆಸ್‌ಗೆ ಜನರಿಂದಲೇ ತಕ್ಕ ಉತ್ತರ - ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್, ಆರ್.ಶ್ರೀನಾಥ ಹೇಳಿಕೆ

HR Srinath Press meet
ಗಂಗಾವತಿ ನಗರದ ಎಚ್‌ಆರ್‌ಜಿ ನಿವಾಸದಲ್ಲಿ ಗುರುವಾರ ಆಯೋಜಿಸಲಾಗಿದ್ದ ಜೆಡಿಎಸ್ ಪದಾಧಿಕಾರಿಗಳ ಸಭೆಯಲ್ಲಿ ಎಚ್.ಆರ್.ಶ್ರೀನಾಥ.
Published on

ಗಂಗಾವತಿ: ಕರೊನಾ ಸಂದಿಗ್ಧ ಸಮಯದಲ್ಲಿ ಅಧಿಕಾರಕ್ಕಾಗಿ ಕಿತ್ತಾಟ ನಡೆಸಿರುವ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ವರ್ತನೆಗೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ ಹೇಳಿದರು.

ನಗರದ ಎಚ್‌ಆರ್‌ಜಿ ನಿವಾಸದಲ್ಲಿ ಗುರುವಾರ ಆಯೋಜಿಸಲಾಗಿದ್ದ ಜೆಡಿಎಸ್ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಕರೊನಾದಿಂದ ಸಾವು ನೋವುಗಳಾಗುತ್ತಿದ್ದು, ಸೂಕ್ತ ಚಿಕಿತ್ಸೆ ನೀಡುವಲ್ಲಿ ಸರ್ಕಾರ ವಿಲವಾಗಿದೆ. ಇಂತಹ ಸಂದರ್ಭದಲ್ಲಿ ವಿಪಕ್ಷ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಹುದ್ದೆಗಾಗಿ ಕಿತ್ತಾಟವಾಡುತ್ತಿದ್ದಾರೆ. ಚುನಾವಣೆ ಇನ್ನೂ ಎರಡು ವರ್ಷವಿದ್ದು, ಆಗ ಜನರು ಯಾರಿಗೆ ಅಧಿಕಾರ ನೀಡಲಿದ್ದಾರೆ ಎಂಬುದು ತಿಳಿಯಲಿದೆ. ಜನಾದೇಶ ಪಡೆಯುವ ಮೊದಲೇ ಸಿಎಂ ಹುದ್ದೆಗಾಗಿ ಕಿತ್ತಾಟ ನಡೆಸಿರುವುದು ಉತ್ತಮ ಬೆಳವಣಿಗೆಯಲ್ಲ. ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಜೆಡಿಎಸ್ ಹೋರಾಟ ನಡೆಸಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net