ಕಲಿಕಾ ವಾತಾವರಣ ನಿರ್ಮಿಸಿ, ತಾಪಂ ಇಒ ರಾಮರೆಡ್ಡಿ ಪಾಟೀಲ್ ಸೂಚನೆ

food grain distribution
ಚಿಕ್ಕಜಂತಕಲ್ ಗ್ರಾಪಂ ವ್ಯಾಪ್ತಿಯ ಹೊಸ ಅಯೋಧ್ಯಾ ಅಂಗನವಾಡಿ ಕೇಂದ್ರಕ್ಕೆ ತಾಪಂ ಇಒ ರಾಮರೆಡ್ಡಿ ಪಾಟೀಲ್ ಮಂಗಳವಾರ ಭೇಟಿ ನೀಡಿ, ದಾಖಲೆ ಪರಿಶೀಲಿಸಿದರು. ಪಿಡಿಒ ಮಲ್ಲಿಕಾರ್ಜುನ ಕಡಿವಾಳ ಸೇರಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿದ್ದರು.
Published on

ಗಂಗಾವತಿ: ತಾಲೂಕಿನ ಚಿಕ್ಕಜಂತಕಲ್ ಗ್ರಾಪಂ ವ್ಯಾಪ್ತಿಯ ಹೊಸ ಅಯೋಧ್ಯಾ ಅಂಗನವಾಡಿ ಕೇಂದ್ರಕ್ಕೆ ತಾಪಂ ಇಒ ರಾಮರೆಡ್ಡಿ ಪಾಟೀಲ್ ಮಂಗಳವಾರ ಭೇಟಿ ನೀಡಿದರು.

ಅಂಗನವಾಡಿ ಕೇಂದ್ರದಲ್ಲಿ ಆಹಾರ ಧಾನ್ಯ ವಿತರಣೆ, ಮಕ್ಕಳ ಹಾಜರಾತಿ, ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದು, ಗುಣಮಟ್ಟ ಪರಿಶೀಲಿಸಿದರು.

ಅಂಗನವಾಡಿ ಚಿಣ್ಣರಿಗೆ ಗುಣಮಟ್ಟದ ಪೌಷ್ಟಿಕ ಆಹಾರ ವಿತರಣೆ ಮಾಡಬೇಕು. ಕೇಂದ್ರದ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮಕ್ಕಳ ಹಾಜರಾತಿ ಹೆಚ್ಚಿಸಬೇಕು. ಮಕ್ಕಳಿಗೆ ಕೇಂದ್ರದಲ್ಲಿ ಕಲಿಕಾ ಪೂರಕ ವಾತಾವರಣ ನಿರ್ಮಿಸಿ ಶಾಲಾ ಪೂರ್ವ ಶಿಕ್ಷಣ ನೀಡಬೇಕು. ಮಕ್ಕಳಿಗೆ ಹಾಡು, ಕಥೆ ಇತರೆ ವಿಭಿನ್ನ ಚಟುವಟಿಕೆಗಳ ಮೂಲಕ ಸೆಳೆಯಬೇಕೆಂದು ತಾಪಂನ ಇಒ ಸೂಚನೆ ನೀಡಿದರು.

ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ವಿತರಿಸುವ ಪೌಷ್ಟಿಕ ಆಹಾರದ ಬಗ್ಗೆ ಪರಿಶೀಲನೆ ನಡೆಸಿದರು. ನಂತರ ಸ.ಹಿ.ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ತಾಪಂ ಅನುದಾನದಲ್ಲಿ ನಿರ್ಮಿಸಿರುವ ಶಾಲೆಯ ಕೊಠಡಿ ದುರಸ್ತಿ ಕಾಮಗಾರಿ ಪರಿಶೀಲಿಸಿದರು. ಪಿಡಿಒ ಮಲ್ಲಿಕಾರ್ಜುನ ಕಡಿವಾಳ, ಮುಖ್ಯಶಿಕ್ಷಕ ಮಂಜುನಾಥ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net