ಗುಂಡಮ್ಮಕ್ಯಾಂಪ್‌ನ ಸಿಟಿ ಮಾರುಕಟ್ಟೆ ಆರಂಭಿಸಿ

MANAVI SALIKE
ಗಂಗಾವತಿ ಗುಂಡಮ್ಮಕ್ಯಾಂಪ್‌ನ ಸಿಟಿ ಮಾರುಕಟ್ಟೆ ಆರಂಭಿಸುವಂತೆ ಒತ್ತಾಯಿಸಿ ಜಿಲ್ಲಾ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿ ಶಾಸಕ ಗಾಲಿ ಜನಾರ್ದನರೆಡ್ಡಿಗೆ ಮನವಿ ಸಲ್ಲಿಸಿತು. ಜಿಲ್ಲಾಧ್ಯಕ್ಷ ಬಸವರಾಜ ಮ್ಯಾಗಳಮನಿ, ಪ್ರಮುಖರಾದ ಚಂದ್ರು ನಿಸರ್ಗ, ಜಡಿಯಪ್ಪ ಹಂಚಿನಾಳ, ರಾಘವೇಂದ್ರ ಕಡೆಬಾಗಿಲು ಇತರರಿದ್ದರು.
Published on

ಗಂಗಾವತಿ: ನನೆಗುದಿಗೆ ಬಿದ್ದಿರುವ ನಗರದ ಗುಂಡಮ್ಮಕ್ಯಾಂಪ್‌ನ ಸಿಟಿ ಮಾರುಕಟ್ಟೆ ಆರಂಭಿಸುವಂತೆ ಒತ್ತಾಯಿಸಿ ಜಿಲ್ಲಾ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿ ಸದಸ್ಯರು ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಶಾಸಕ ಗಾಲಿ ಜನಾರ್ದನರೆಡ್ಡಿಗೆ ಮನವಿ ಸಲ್ಲಿಸಿದರು.

ಸಮಿತಿ ಜಿಲ್ಲಾಧ್ಯಕ್ಷ ಬಸವರಾಜ ಮ್ಯಾಗಳಮನಿ ಮಾತನಾಡಿ, 25 ವರ್ಷಗಳಿಂದ ಸಿಟಿ ಮಾರುಕಟ್ಟೆ ಆರಂಭವಾಗದೇ ನನೆಗುದಿಗೆ ಬಿದ್ದಿದ್ದು, ನಿರ್ವಹಣೆಗಾಗಿ ಕೋಟಿಗಟ್ಟಲೇ ಹಣ ವ್ಯಯಿಸಲಾಗುತ್ತಿದೆ.

ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಮಾರುಕಟ್ಟೆ ಆರಂಭಿಸಬೇಕಿತ್ತು. ಆದರೆ, ಚುನಾವಣೆಯಾಗಿ 2ವರ್ಷ ಕಳೆದರೂ ಮಾರುಕಟ್ಟೆಗೆ ಆರಂಭ ಭಾಗ್ಯ ಸಿಕ್ಕಿಲ್ಲ. ರಸ್ತೆ ಬದಿಯಲ್ಲಿ ವ್ಯಾಪಾರ ನಡೆಯುತ್ತಿದ್ದು, ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸಿಟಿ ಮಾರುಕಟ್ಟೆ ಆರಂಭಿಸಿದರೆ ಬೀದಿ ಬದಿ ವ್ಯಾಪಾರಿಗಳನ್ನು ಸ್ಥಳಾಂತರಿಸಲು ಅನುಕೂಲವಾಗಲಿದೆ. ವಿವಿಧ ಇಲಾಖೆಗಳಿಗೆ ಸ್ವಂತ ಕಟ್ಟಡ, ಅಲೆಮಾರಿ ಕುಟುಂಬಗಳಿಗೆ ಸೂರಿನ ವ್ಯವಸ್ಥೆ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಶಾಸಕರೊಂದಿಗೆ ನಗರದ ವಹಿವಾಟು ಸಮಸ್ಯೆ ಕುರಿತು ಚರ್ಚಿಸಲಾಯಿತು.

ಪ್ರಮುಖರಾದ ಚಂದ್ರು ನಿಸರ್ಗ, ಜಡಿಯಪ್ಪ ಹಂಚಿನಾಳ, ರಾಘವೇಂದ್ರ ಕಡೆಬಾಗಿಲು, ಸುರೇಶ ತೋಟದ್, ದುರ್ಗೇಶ್ ಹೊಸಳ್ಳಿ, ರಾಮಣ್ಣ ರುದ್ರಾಕ್ಷಿ, ಬಸವರಾಜ್ ನಾಯಕ, ಮಂಜುನಾಥ ಚನ್ನಾದಾಸರ, ರಮೇಶ್ ಚಿಕ್ಕ ಜಂತಗಲ್, ಹನುಮಂತಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net