

ಗಂಗಾವತಿ : ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ನಡೆಸಬಾರದು ಎಂದು ಒತ್ತಾಯಿಸಿ ಎಸ್‌ಎ್ಐ ತಾಲೂಕು ಸಮಿತಿ ಸದಸ್ಯರು ನಗರದಲ್ಲಿ ಶಾಸಕರ ಗೃಹ ಕಚೇರಿ ಎದುರು ಭಾನುವಾರ ಪ್ರತಿಭಟನೆ ನಡೆಸಿದರು.
ಸಮಿತಿ ತಾಲೂಕು ಅಧ್ಯಕ್ಷ ಗ್ಯಾನೇಶ ಕಡಗದ್ ಮಾತನಾಡಿ, ಕೋವಿಡ್ ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಎಲ್ಲ ವಿವಿಗಳ ವ್ಯಾಪ್ತಿಯಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ ಒಂದೇ ತಿಂಗಳಿನಲ್ಲಿ ಎರಡು ಸೆಮಿಸ್ಟರ್‌ಗಳ ಪರೀಕ್ಷೆಗಳನ್ನು ಆಯೋಜಿಸುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಆನ್‌ಲೈನ್ ತರಗತಿಗಳನ್ನು ಆಯೋಜಿಸಲಾಗಿದ್ದರೂ ಗ್ರಾಮೀಣ ಭಾಗದಲ್ಲಿ ನೆಟ್‌ವರ್ಕ್ ಸಮಸ್ಯೆಯಿಂದ ವಿದ್ಯಾರ್ಥಿಗಳಿಗೆ ಸರಿಯಾಗಿ ತಲುಪಿಲ್ಲ ಎಂದರು .ಶಾಸಕರ ಆಪ್ತ ಸಹಾಯಕ ಚನ್ನಪ್ಪ ಶಿಡ್ಲಘಟ್ಟಗೆ ಮನವಿ ಸಲ್ಲಿಸಿದರು.
ಪದಾಧಿಕಾರಿಗಳಾದ ಹನುಮಂತಪ್ಪ ಮುಕ್ಕಂಪಿ, ಸೋಮನಾಥ, ಶಿವಕುಮಾರ, ನಾಗರಾಜ್, ಅಭಿಷೇಕ, ನಂದಕುಮಾರ, ಮೌನೇಶ, ದಾವಲ್‌ಸಾಬ್ ಹಾಗೂ ಇತರರಿದ್ದರು.