

ಗಂಗಾವತಿ: ತಾಲೂಕಿನ ಶ್ರೀರಾಮನಗರದಲ್ಲಿ ಚಿತ್ರನಟ ಡಾ. ಪುನೀತ್ ರಾಜಕುಮಾರ ವೃತ್ತದಲ್ಲಿ ಅಭಿಮಾನಿ ಬಳಗದಿಂದ ಅವರ 50ನೇ ವರ್ಷದ ಜನ್ಮದಿನೋತ್ಸವ ಸೋಮವಾರ ಹಮ್ಮಿಕೊಳ್ಳಲಾಗಿತ್ತು.
ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ ಮಾತನಾಡಿ, ಪರಿಣಾಮಕಾರಿ ಚಿತ್ರಗಳ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸಿದ ಪುನೀತ್ ರಾಜಕುಮಾರ ಶ್ರೇಷ್ಠ ನಟರಾಗಿದ್ದರು. ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದರಲ್ಲದೆ, ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ನಾಡಿನ ಗಮನಸೆಳೆದಿದ್ದರು ಎಂದರು.
ನಂತರ ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಸಾಮೂಹಿಕ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಲಯನ್ಸ್ ಕ್ಲಬ್ ತಾಲೂಕು ಅಧ್ಯಕ್ಷ ಸುಬ್ರಮಣ್ಯೇಶ್ವರ ರಾವ್, ಗ್ರಾಪಂ ಸದಸ್ಯರಾದ ಮೆಹಬೂಬ್, ಸಾಂಬಮೂರ್ತಿ, ಮುಖಂಡರಾದ ಮಂಜುನಾಥ, ಮೈಲಾರಿರಾವ್, ಸಾದಿಕ್ ಇತರರಿದ್ದರು.
ಉಡುಮಕಲ್: ತಾಲೂಕಿನ ಉಡುಮಕಲ್‌ನ ಪುನೀತ್ ರಾಜಕುಮಾರ ವೃತ್ತದಲ್ಲಿ ಅಪ್ಪು ಜನ್ಮದಿನೋತ್ಸವ ಹಮ್ಮಿಕೊಳ್ಳಲಾಗಿತ್ತು. ಅಭಿಮಾನಿ ಬಳಗ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ, ಕೇಕ್ ಕತ್ತರಿಸುವ ಮೂಲಕ ಚಾಲನೆ ನೀಡಿದರು.