

ಗಂಗಾವತಿ: ನಗರದ ಮೇದಾರ ಕ್ಷೇಮಾಭಿವೃದ್ಧಿ ಸಂಘದ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ನಿಂದ ಹೊಲಿಗೆ ತರಬೇತಿ ಶಿಬಿರದ ಸಮಾರೋಪ ಶನಿವಾರ ಹಮ್ಮಿಕೊಳ್ಳಲಾಗಿತ್ತು.
ಟ್ರಸ್ಟ್‌ನಿಂದ ವಿನಾಯಕ ನಗರ ವಲಯದ ಕಿತ್ತೂರು ರಾಣಿ ಚನ್ನಮ್ಮ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗಾಗಿ 3 ತಿಂಗಳು ಹೊಲಿಗೆ ಉಚಿತ ತರಬೇತಿ ಶಿಬಿರ ಆಯೋಜಿಸಿದ್ದು, ಸ್ವಾವಲಂಬನೆ ಮಾರ್ಗಸೂಚಿಗಳನ್ನು ತಿಳಿಸಿಕೊಡಲಾಯಿತು.
ಸಮಾರೋಪದಲ್ಲಿ ನಗರಸಭೆ ವಿಪಕ್ಷ ನಾಯಕ ಮನೋಹರಸ್ವಾಮಿ ಹಿರೇಮಠ ಮಾತನಾಡಿ, ಮಹಿಳಾ ಸಬಲೀಕರಣಕ್ಕೆ ಟ್ರಸ್ಟ್ ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಸ್ವ ಉದ್ಯೋಗದೊಂದಿಗೆ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಿದೆ ಎಂದರು.
ಟ್ರಸ್ಟ್ ಯೋಜನೆಗಳು, ತರಬೇತಿ ಶಿಬಿರ ಮತ್ತು ಅನುಷ್ಠಾನ ಕುರಿತು ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಹಿರಿಂಜ ಮಾತನಾಡಿದರು. ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ತರಬೇತಿ ಶಿಕ್ಷಕಿ ಅಂಬಮ್ಮ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸುಧಾ, ವಲಯ ಮೇಲ್ವಿಚಾರಕಿ ಸರೋಜಾ, ಒಕ್ಕೂಟದ ಅಧ್ಯಕ್ಷೆ ಶ್ರೀದೇವಿ, ಸೇವಾ ಪ್ರತಿನಿಧಿ ರುಕ್ಸಾರ್ ಇತರರಿದ್ದರು.