ಹಾಸ್ಟೆಲ್ ಆಯ್ಕೆ ಪಟ್ಟಿ ಪ್ರಕಟಿಸುವಂತೆ ಒತ್ತಾಯ

22022021 Gangavati SFI Insists
Published on

ಗಂಗಾವತಿ: ಹಾಸ್ಟೆಲ್ ಆಯ್ಕೆ ಪಟ್ಟಿ ಪ್ರಕಟಿಸುವಂತೆ ಒತ್ತಾಯಿಸಿ ಎಸ್‌ಎಫ್ಐ ತಾಲೂಕು ಸಮಿತಿ ಸದಸ್ಯರು ನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತೀರ್ಣಾಧಿಕಾರಿ ಸುರೇಶಗೆ ಸೋಮವಾರ ಮನವಿ ಸಲ್ಲಿಸಿದರು.

ಕಾರ್ಯದರ್ಶಿ ಶಿವಕುಮಾರ ಈಚನಾಳ್, ಸದಸ್ಯರಾದ ಸೋಮನಾಥ, ಹನುಮಂತ ಇತರರಿದ್ದರು.

ಸಮಿತಿ ತಾಲೂಕಾಧ್ಯಕ್ಷ ಗ್ಯಾನೇಶ ಕಡಗದ್ ಮಾತನಾಡಿ, ಶಾಲಾ ಕಾಲೇಜು ಆರಂಭವಾಗಿ 2 ತಿಂಗಳಾಗಿದ್ದು, ಹಾಸ್ಟೆಲ್‌ಗಾಗಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಇನ್ನೂ ಪ್ರಕಟಿಸಿಲ್ಲ. ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು, ವೆಚ್ಚ ಹೆಚ್ಚಾಗುತ್ತಿದೆ. ಗಂಗಾವತಿ, ಕನಕಗಿರಿ ಮತ್ತು ಕಾರಟಗಿ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಲ್ಲ. ಕಾಲಮಿತಿಯೊಳಗೆ ಆಯ್ಕೆ ಪಟ್ಟಿ ಪ್ರಕಟಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net