ಕರ ವಸೂಲಿ ಮಾಡಲು ಅಧಿಕಾರಿಗಳಿಗೆ ಡಿಸಿ ವಿಕಾಸ್ ಕಿಶೋರ್ ಸೂಚನೆ

Koppal DC Vikas Kishor
ಡಿಸಿ ಎಸ್.ವಿಕಾಸ್ ಕಿಶೋರ್
Published on

ಗಂಗಾವತಿ: ಕರ ವಸೂಲಿ ಸಮರ್ಪಕವಾಗಿ ಮಾಡಬೇಕು. ನನೆಗುದಿಗೆ ಬಿದ್ದಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮಳೆಗಾಲ ಮುಗಿಯುವುದರೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಡಿಸಿ ಎಸ್.ವಿಕಾಸ್ ಕಿಶೋರ್ ಸೂಚನೆ ನೀಡಿದರು.

ನಗರದ ಸರ್ಕಿಟ್ ಹೌಸ್‌ನಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಗಂಗಾವತಿ ನಗರಸಭೆ, ಕಾರಟಗಿ ಮತ್ತು ಕನಕಗಿರಿ ಪುರಸಭೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಅಮೃತ ಸಿಟಿ, ನಗರೋತ್ಥಾನ, 14 ಮತ್ತು 15ನೇ ಹಣಕಾಸು ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ವಿಳಂಬಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಯಾಗಿಸಲಾಗುವುದು ಎಂದರು. ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಕೆ.ಗಂಗಪ್ಪ, ಪೌರಾಯುಕ್ತ ಅರವಿಂದ ಜಮಖಂಡಿ, ಎಇಇಗಳಾದ ಗಂಗಾಧರ, ಕೆ.ಆರ್.ಅಭಿಷೇಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net