ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲಿ

Gangavathi Independance pilimanary meeting
ಗಂಗಾವತಿ ತಾಲೂಕು ಪಂಚಾಯಿತಿ ಮಂಥನ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಪ್ರಭಾರ ತಹಸೀಲ್ದಾರ್ ರವಿ ಎಸ್.ಅಂಗಡಿ ಮಾತನಾಡಿದರು. ನಗರಸಭೆ ಅಧ್ಯಕ್ಷೆ ಹೀರಾಬಾಯಿ ಸಿಂಗ್, ತಾಪಂ ಇಒ ರಾಮರಡ್ಡಿ ಪಾಟೀಲ್ ಇದ್ದರು.
Published on

ಗಂಗಾವತಿ: ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ಎಲ್ಲ ಇಲಾಖೆಗಳ ಸಹಯೋಗದಲ್ಲಿ ಅಚರಿಸಲಾಗುತ್ತಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಪ್ರಭಾರ ತಹಸೀಲ್ದಾರ್ ರವಿ ಎಸ್. ಅಂಗಡಿ ತಿಳಿಸಿದರು.

ನಗರದ ತಾಲೂಕು ಪಂಚಾಯಿತಿ ಮಂಥನ ಸಭಾಂಗಣದಲ್ಲಿ ತಾಲೂಕಿನ ಆಡಳಿತದಿಂದ ಮಂಗಳವಾರ ಹಮ್ಮಿಕೊಂಡಿದ್ದ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ತಾಲೂಕು ಕ್ರೀಡಾಂಗಣದಲ್ಲಿ ಧ್ವಜಾರೋಹಣ, ಪರೇಡ್ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿದ್ದು, ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಸ್ತಬ್ಧಚಿತ್ರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಶಾಲೆಗಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಲಾಗುವುದು. ಮಕ್ಕಳಿಗೆ ಉಪಹಾರ ಕಲ್ಪಿಸಲಾಗುವುದು.

ಕಾರ್ಯಕ್ರಮದ ಜವಾಬ್ದಾರಿಯನ್ನು ಆಯಾ ಇಲಾಖೆ ಅಧಿಕಾರಿಗಳಿಗೆ ವಹಿಸಲಾಗಿದ್ದು, ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು. ಧ್ವಜಾರೋಹಣ ವೇದಿಕೆಯಲ್ಲಿ ಶಿಷ್ಟಾಚಾರ ಪಾಲಿಸಬೇಕಿದ್ದು, ಜನಪ್ರತಿನಿಧಿಗಳನ್ನು ಹೊರತು ಬೇರೆ ಯಾರಿಗೂ ಅವಕಾಶ ನೀಡದಂತೆ ವಿವಿಧ ಸಂಘಟನೆ ಪದಾಧಿಕಾರಿಗಳು ಸಲಹೆ ನೀಡಿದರು.

ನಗರಸಭೆ ಅಧ್ಯಕ್ಷೆ ಹೀರಾಬಾಯಿ ಸಿಂಗ್, ತಾಲೂಕು ಪಂಚಾಯಿತಿ ಇಒ ರಾಮರೆಡ್ಡಿ ಪಾಟೀಲ್, ಸಿಡಿಪಿಒ ಜಯಶ್ರೀ ರಾಜಪುರೋಹಿತ್, ಶಿಕ್ಷಣ ಸಂಯೋಜಕ ರವಿ ನಾಗಮ್ಮನವರ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಸರಸ್ವತಿ ಜೂಡಿ, ನಗರಸಭೆ ಪರಿಸರ ಇಂಜಿನಿಯರ್ ಚೇತನ್, ಆರೋಗ್ಯ ನಿರೀಕ್ಷಕ ಎ.ನಾಗರಾಜ, ಪ್ರಮುಖರಾದ ಚನ್ನಬಸವ ಜೇಕಿನ್, ರಮೇಶ ಕೋಟಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net