ಅಂಜನಾದ್ರಿಯಲ್ಲಿ ಅಭಿವೃದ್ಧಿ ಪರ್ವ ಶುರು, ಶಾಸಕ ಗಾಲಿ ಜನಾರ್ದನರೆಡ್ಡಿ ಹೇಳಿಕೆ

Independence Day
ಗಂಗಾವತಿ ತಾಲೂಕು ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಕ್ಕೆ ಶಾಸಕ ಗಾಲಿ ಜನಾರ್ದರನೆಡ್ಡಿ ಪುಷ್ಪಾರ್ಪಣೆ ಸಲ್ಲಿಸಿದರು. ಪ್ರಭಾರ ತಹಸೀಲ್ದಾರ್ ಎಸ್.ರವಿ ಅಂಗಡಿ, ನಗರಸಭೆ ಅಧ್ಯಕ್ಷೆ ಹೀರಾಬಾಯಿ ಸಿಂಗ್, ನಯೋಪ್ರಾ ಅಧ್ಯಕ್ಷ ಸೈಯದ್ ಇಲಿಯಾಸ್ ಬಾಬಾ ಇತರರಿದ್ದರು.
Published on

ಗಂಗಾವತಿ: ತಾಲೂಕಿನ ಐತಿಹಾಸಿಕ ಅಂಜನಾದ್ರಿ ಬೆಟ್ಟದಲ್ಲಿ ಅಭಿವೃದ್ಧಿ ಪರ್ವ ಶುರುವಾಗಿದ್ದು, ನಗರದ ಎಲ್ಲ ರಸ್ತೆಗಳ ಶಾಶ್ವತ ದುರಸ್ತಿಗಾಗಿ 70 ಕೋಟಿ ರೂ. ಮೀಸಲಿರಿಸಲಾಗಿದೆ ಎಂದು ಶಾಸಕ ಗಾಲಿ ಜನಾರ್ದನರೆಡ್ಡಿ ಹೇಳಿದರು.

ನಗರದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕಾಡಳಿತ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಾತಂತ್ರೃ ದಿನ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.

ಅಂಜನಾದ್ರಿಯಲ್ಲಿ ಯಾತ್ರಿ ನಿವಾಸ ಪೂರ್ಣಗೊಳ್ಳುವ ಹಂತಕ್ಕೆ ಬಂದಿದ್ದು, ಉಳಿದ ಕಾಮಗಾರಿಗಳಿಗೂ ಶೀಘ್ರವೇ ಚಾಲನೆ ನೀಡಲಾಗುವುದು. ರಸ್ತೆ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್‌ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕ್ಷೇತ್ರದಲ್ಲಿ ಡ್ರಗ್ಸ್ ಹಾವಳಿ ಹೆಚ್ಚುತ್ತಿದ್ದು, ಯುವಕರು ಹಾಳಾಗುತ್ತಿದ್ದಾರೆ. ಪೊಲೀಸ್ ಇಲಾಖೆ ಇನ್ನಷ್ಟು ಬಿಗಿ ಕ್ರಮಗಳ ಮೂಲಕ ಡ್ರಗ್ಸ್ ಚಟುವಟಿಕೆ ನಿಯಂತ್ರಿಸುವಂತೆ ಸೂಚಿಸಿದರು.

ಧ್ವಜಾರೋಹಣ ನೆರವೇರಿಸಿದ ಪ್ರಭಾರ ತಹಸೀಲ್ದಾರ್ ಎಸ್.ರವಿ ಅಂಗಡಿ ಮಾತನಾಡಿದರು. ಅಂಗನವಾಡಿ ಕೇಂದ್ರಗಳಿಗೆ ಟಿವಿಗಳನ್ನು ವಿತರಿಸಲಾಯಿತು. ಸ್ವಾತಂತ್ರ್ಯೋತ್ಸವ ನಿಮಿತ್ತ ಹಮ್ಮಿಕೊಂಡ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿವಿಧ ಇಲಾಖೆ ಪ್ರೋತ್ಸಾಹದ ಕಿಟ್‌ಗಳನ್ನು ವಿತರಿಸಲಾಯಿತು.

ಇದಕ್ಕೂ ಮುನ್ನ ಪೊಲೀಸ್, ಗೃಹರಕ್ಷಕ, ಎನ್‌ಸಿಸಿ, ಭಾರತ ಸೇವಾ ದಳ, ಜೆಸ್ಕಾಂ ಸುರಕ್ಷತಾ ತಂಡ, ಸ್ಕೌಟ್ಸ್ ಮತ್ತು ಗೈಡ್ಸ್‌ನಿಂದ ಆಕರ್ಷಕ ಪಥ ಸಂಚಲನ ನಡೆಯಿತು. ತೆರೆದ ವಾಹನದಲ್ಲಿ ಶಾಸಕ ಗಾಲಿ ಜನಾರ್ದನರೆಡ್ಡಿ ಮತ್ತು ಪ್ರಭಾರ ತಹಸೀಲ್ದಾರ್ ಎಸ್.ರವಿ ಅಂಗಡಿ ಧ್ವಜ ವಂದನೆ ಸ್ವೀಕರಿಸಿದರು. ನಂತರ ವಿವಿಧ ಶಾಲೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.

ನಗರಸಭೆ ಅಧ್ಯಕ್ಷೆ ಹೀರಾಬಾಯಿಸಿಂಗ್, ನಯೋಪ್ರಾ ಅಧ್ಯಕ್ಷ ಸೈಯದ್ ಇಲಿಯಾಸ್ ಬಾಬಾ, ಡಿವೈಎಸ್ಪಿ ಸಿದ್ದಲಿಂಗಪ್ಪ ಗೌಡ ಪಾಟೀಲ್, ಪೌರಾಯುಕ್ತ ಆರ್. ವಿರೂಪಾಕ್ಷಮೂರ್ತಿ, ತಾಪಂ ಇಒ ರಾಮರೆಡ್ಡಿ ಪಾಟೀಲ್, ಬಿಇಒ ಎಚ್.ಬಿ.ನಟೇಶ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net