ಸೊಳ್ಳೆ ಉತ್ಪತ್ತಿಗೆ ಅವಕಾಶ ನೀಡದಿರಿ

Untitled design(9)
Published on

ಗಂಗಾವತಿ: ನಗರದ ಇಸ್ಲಾಂಪುರದ 2ನೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಪವಿಭಾಗ ಆಸ್ಪತ್ರೆಯ ಹಮ್ಮಿಕೊಂಡಿದ್ದ ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಆರೋಗ್ಯ ಸ್ವಯಂಸೇವಕರಿಗಾಗಿ ತರಬೇತಿ ಕಾರ್ಯಾಗಾರ ಶುಕ್ರವಾರ ನಡೆಯಿತು.

ಕಾರ್ಯಾಗಾರಕ್ಕೆ ಚಾಲನೆ ನೀಡಿ ತಾಲೂಕು ವೈದ್ಯಾಧಿಕಾರಿ ಡಾ.ಗೌರಿಶಂಕರ ಚಿತ್ರಿಕಿ ಮಾತನಾಡಿ, ಮುಂಗಾರು ಅವಧಿಯಲ್ಲಿ ಅಧಿಕ ಮಳೆಯಾಗುತ್ತಿದೆ. ಎಲ್ಲೆಂದರಲ್ಲಿ ನೀರು ಸಂಗ್ರಹವಾಗುತ್ತದೆ. ನಿಂತ ನೀರಿನಲ್ಲಿ ಸೊಳ್ಳೆ ಉತ್ಪತ್ತಿಯಾಗುತ್ತಿದ್ದು ಡೆಂೆ ಮತ್ತು ಚಿಕೂನ್ ಗುನ್ಯಾ ರೋಗಗಳು ಹೆಚ್ಚಾಗುತ್ತಿವೆ. ಸಾಂಕ್ರಾಮಿಕ ಕಾಯಿಲೆ ಹರಡುವ ಸಾಧ್ಯತೆಗಳಿರುವುದರಿಂದ ಸ್ವಯಂ ಸೇವಕರ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಸ್ವಯಂ ಸೇವಕರು ನಗರದ ಪ್ರತಿವಾರ್ಡ್ ಮನೆಗಳಿಗೆ ತೆರಳಿ ಸಮೀಕ್ಷೆ ನಡೆಸಬೇಕಿದ್ದು, ಜನರಲ್ಲಿ ಜಾಗೃತಿ ಮೂಡಿಸುವಂತೆ ಸಲಹೆ ನೀಡಿದರು.

ತಾಲೂಕು ಮೇಲ್ವಿಚಾರಕ ದೇವೇಂದ್ರ ಗೌಡ ಮಾತನಾಡಿ, ಮಳೆಗಾಲ ಹಿನ್ನೆಲೆಯಲ್ಲಿ ನಗರದಲ್ಲಿ ಸೊಳ್ಳೆಯಿಂದ ಹರಡುವ ಡೆಂೆ ಮತ್ತು ಚಿಕೂನ್‌ಗುನ್ಯಾ ರೋಗ ನಿಯಂತ್ರಣಕ್ಕೆ ಮತ್ತು ಜನರಿಗೆ ಆರೋಗ್ಯ ಶಿಕ್ಷಣ ನೀಡಲು ಸ್ವಯಂಸೇವಕರನ್ನು ತಾತ್ಕಾಲಿಕ ನಿಯೋಜಿಸಲಾಗಿದೆ ಎಂದರು.

ವೈದ್ಯಾಧಿಕಾರಿ ಡಾ.ವಿನೋದ್, ಲಿಂಕ್ ವರ್ಕರ್‌ಗಳಾದ ಸುರೇಶ, ಗುರುಪ್ರಸಾದ, ರಮೇಶ ಸೇರಿ ಆರೋಗ್ಯ ಕಾರ್ಯಕರ್ತೆಯರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net